ಚಿಕ್ಕೋಡಿ: ಡಿಸಿಸಿ ಬ್ಯಾಂಕ್ ಚುನಾವಣೆ (Belagavi DCC Bank) ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಜಾರಕಿಹೊಳಿ ಸಹೋದರರನ್ನು ಬದಿಗಿಟ್ಟು ಡಿಸಿಸಿ ಬ್ಯಾಂಕ್ ಹತೋಟಿಗೆ ಪಡೆಯುವ ಬೆಳಗಾವಿ ಜಿಲ್ಲೆಯ ಪಕ್ಷಾತೀತ ಲಿಂಗಾಯತ ನಾಯಕರ ಪ್ಲಾನ್ ಫ್ಲಾಪ್ ಮಾಡುವಲ್ಲಿ ಜಾರಕಿಹೊಳಿ ಸಹೋದರರು (Jarkiholi Brothers) ಯಶಸ್ವಿಯಾಗಿದ್ದಾರೆ.
ಲಿಂಗಾಯತ ನಾಯಕರ ಸಭೆಗೆ (Lingayat Leaders Meeting) ಜಾರಕಿಹೊಳಿ ಬ್ರದರ್ಸ್ ಚೆಕ್ ಮೇಟ್ ನೀಡಿದ್ದು ಕೊಲ್ಲಾಪೂರ ಮಠವೊಂದರಲ್ಲಿ ನಡೆದ ಬೆಳಗಾವಿ ಲಿಂಗಾಯತ ನಾಯಕರ ಸಭೆ ಬಹುತೇಕ ವಿಫಲವಾದಂತಾಗಿದೆ. ಲಿಂಗಾಯತ ನಾಯಕರ ಸಭೆ ಬೆನ್ನಲ್ಲೇ ಲಿಂಗಾಯತ ಮುಖಂಡ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಜೊತೆ ಜಾರಕಿಹೊಳಿ ಸಹೋದರರು ಸಂಧಾನ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ಆರೋಪ ನಿಜ, ಬೆಂ.ಗ್ರಾಮಾಂತರ ಕ್ಷೇತ್ರದ ಮತದಾನದಲ್ಲೂ ಗೋಲ್ಮಾಲ್ ನಡೆದಿದೆ – ಡಿಕೆಶಿ
ಚಿಕ್ಕೋಡಿ ತಾಲೂಕಿನ ಎಕ್ಸಂಬಾ ಪಟ್ಟಣದಲ್ಲಿರುವ ಅಣ್ಣಾಸಾಹೇಬ ಜೊಲ್ಲೆ (Annasaheb Jolle) ಮಾಲೀಕತ್ವದ ಬ್ಯಾಂಕಿನಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಜೊತೆಗೆ ಬಾಲಚಂದ್ರ ಜಾರಕಿಹೊಳಿ ಸಭೆ ನಡೆಸಿದ್ದಾರೆ. ಸಚಿವ ಸತೀಶ ಜಾರಕಿಹೊಳಿ, ಶಾಸಕ ರಮೇಶ ಜಾರಕಿಹೊಳಿ, ಲಕ್ಷ್ಮಣ ಸವದಿ, ಪ್ರಭಾಕರ ಕೋರೆ, ಬಾಲಚಂದ್ರ ಜಾರಕಿಹೊಳಿ, ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ಚುನಾವಣೆ ನಡೆಸಲು ಸಭೆಯಲ್ಲಿ ತೀರ್ಮಾನಿಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
ಎಲ್ಲ ಮುಖಂಡರ ಸೇರಿ ಸಮಿತಿ ಮಾಡಿ ಚುನಾವಣೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದ್ದು ಕತ್ತಿ ಕುಟುಂಬ ಹೊರಗಿಟ್ಟು ಸಮಿತಿ ರಚನೆ ಮಾಡಲು ತಯಾರಿ ನಡೆಸಲಾಗುತ್ತಿದೆ.