ಬೆಂಗಳೂರು ಬ್ಲಾಸ್ಟ್ ಪ್ರಕರಣ – ಪ್ರಮುಖ ಆರೋಪಿ ಸಿಸಿಬಿ ವಶಕ್ಕೆ

Public TV
1 Min Read

ಬೆಂಗಳೂರು: ಶಂಕಿತ ಉಗ್ರರ (Suspected Terrorist) ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ನಾಸಿರ್‌ನನ್ನು ಸಿಸಿಬಿ ವಶಕ್ಕೆ ಪಡೆದಿದೆ.

ಈಗಾಗಲೇ ಬೇರೊಂದು ಪ್ರಕರಣದಲ್ಲಿ ಜೈಲಿನಲ್ಲಿ ಇರುವ ನಾಸಿರ್‌ನನ್ನು ಶುಕ್ರವಾರದಿಂದ 8 ದಿನಗಳ ಕಾಲ ಸಿಸಿಬಿ ವಶಕ್ಕೆ ಪಡೆದು ವಿಚಾರಣೆ ನಡೆಸಲು ಅವಕಾಶ ನೀಡಿದ್ದು, ಪ್ರಕರಣದ ಪ್ರಮುಖ ಅಂಶಗಳನ್ನು ಬಯಲಿಗೆ ಎಳೆಯಲು ಸಿಸಿಬಿ (CCB) ತನಿಖೆ ಮುಂದುವರೆಸಿದ್ದಾರೆ. ಇದನ್ನೂ ಓದಿ: ಹಳ್ಳದಲ್ಲಿ ಕೊಚ್ಚಿ ಹೋದ ಯುವಕನ ಮೃತದೇಹ ಪತ್ತೆ ಮಾಡಲು ಡ್ರೋನ್ ಮೊರೆಹೋದ ಪೊಲೀಸರು

ಬೆಂಗಳೂರಿನಲ್ಲಿ (Bengaluru) ಬ್ಲಾಸ್ಟ್ ನಡೆಸಲು ಯೋಜನೆ ರೂಪಿಸಿದ್ದ ಶಂಕಿತರೆಲ್ಲರ ಅಕೌಂಟ್‌ಗೆ ವಿದೇಶದಿಂದ 26 ಲಕ್ಷ ರೂ. ಹಣ ವರ್ಗಾವಣೆಯಾಗಿರುವುದು ತನಿಖೆಯ ವೇಳೆ ಬಯಲಾಗಿದೆ. ಕಳೆದ ಆರು ತಿಂಗಳಿನಿಂದ ಬೇರೆ ಬೇರೆ ವ್ಯಕ್ತಿಗಳ ಜೊತೆಯಲ್ಲಿ ಸಂಪರ್ಕದಲ್ಲಿದ್ದ ಆರೋಪಿಗಳಿಗೆ ಹಣ ವರ್ಗಾವಣೆಯಾಗಿದೆ. ಇದನ್ನೂ ಓದಿ: ಲೇಡಿಸ್ ಟಾಯ್ಲೆಟ್‌ನಲ್ಲಿ ಸ್ಪೈ ಕ್ಯಾಮೆರಾ ಇಟ್ಟಿಲ್ಲ, ಮೊಬೈಲ್‌ನಲ್ಲಿ ಫೋಟೋ-ವೀಡಿಯೋ ಸಿಕ್ಕಿಲ್ಲ: ಖುಷ್ಬು ಸುಂದರ್

ನಾಲ್ಕು ಗ್ರೆನೇಡ್‌ಗಳು ಮಾತ್ರ ಪತ್ತೆಯಾಗಿದ್ದಲ್ಲದೇ ಬೇರೆಡೆಗೂ ಗ್ರೆನೇಡ್‌ಗಳನ್ನು ಕಳುಹಿಸಲಾಗಿದೆ ಎಂಬುದು ತಿಳಿದುಬಂದಿದೆ. ಇದನ್ನು ಪತ್ತೆಹಚ್ಚಲಾಗುತ್ತಿದೆ ಎಂದು ಸಿಸಿಬಿ ನ್ಯಾಯಾಲಯಕ್ಕೆ ಪಬ್ಲಿಕ್ ಪ್ರಾಸಿಕ್ಯೂಟರ್ ಬಿಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಸದ್ಯ ಆರೋಪಿಗಳು ಮತ್ತೆ 10 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದು, ಅವರ ಬಳಿ ಇನ್ನೊಂದಷ್ಟು ಮಾಹಿತಿ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಹುಡುಗಿಯರು ಪ್ರೀತಿ ಮಾಡ್ಬೇಡಿ ಪ್ಲೀಸ್ – ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ!

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್