ಬೆಂಗಳೂರು: ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಅಧಿಕಾರ ವಹಿಸಿಕೊಂಡು ವಾರ ಕಳೆದರೂ ಸಂಪುಟ ರಚನೆಯಾಗಿಲ್ಲ. ಆದರೆ ಈ ಮಧ್ಯೆ ಬಿಎಸ್‍ವೈ ಅವರು ಏಕಚಕ್ರಾಧಿಪತ್ಯವಾಗಿ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದ್ದಾರೆ.
ಮೂರು ದಿನದ ಅಂತರದಲ್ಲಿ ನಾಲ್ಕು ನಾಲ್ಕು ಆದೇಶಗಳನ್ನು ಸಿಎಂ ಹೊರಡಿಸಿದ್ದಾರೆ. ದೋಸ್ತಿ ಸರ್ಕಾರದಲ್ಲಿ ಇದ್ದ ಅಧಿಕಾರಿಗಳೇ ಬಿಎಸ್‍ವೈ ಅವರ ಮೈನ್ ಟಾರ್ಗೆಟ್ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಒಂದೇ ದಿನಕ್ಕೆ ನಾಲ್ಕು ಆದೇಶ, ವರ್ಗಾವಣೆಯಾದ ನಾಲ್ಕೇ ಗಂಟೆಯಲ್ಲಿ ಮತ್ತೊಂದು ಆದೇಶ ರದ್ದು ಮಾಡಿದ್ದಾರೆ. ಐಪಿಎಸ್, ಐಎಎಸ್ ಅಧಿಕಾರಿಗಳನ್ನೇ ವರ್ಗಾವಣೆ ಮಾಡುತ್ತಾ ಕುಳಿತ ಬಿಎಸ್‍ವೈ, ಎರಡನೇ ದಿನಕ್ಕೆ ಸಿಎಂ ಅವರು ಐದು ವರ್ಗಾವಣೆ ಆದೇಶ ಹೊರಡಿಸಿದ್ದಾರೆ.
ನಗರದ ಪೊಲೀಸ್ ಆಯುಕ್ತರಾಗಿ ನೇಮಕವಾದ ಕೆಲವೇ ದಿನಗಳಲ್ಲಿ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ವರ್ಗಾವಣೆ ಮಾಡಿ ನೂತನ ಸರ್ಕಾರ ಶುಕ್ರವಾರ ಆದೇಶ ನೀಡಿದ್ದು, ಈ ಸ್ಥಾನಕ್ಕೆ ಭಾಸ್ಕರ್ ರಾವ್ ಅವರನ್ನು ನೇಮಕ ಮಾಡಲಾಗಿದೆ.
ಎಡಿಜಿಪಿ ಆಗಿದ್ದ ಅಲೋಕ್ ಕುಮಾರ್ ಅವರನ್ನು 45 ದಿನಗಳ ಹಿಂದೆಯಷ್ಟೇ ಮೈತ್ರಿ ಸರ್ಕಾರ ನಗರದ ಆಯುಕ್ತರನ್ನಾಗಿ ನೇಮಕ ಮಾಡಿತ್ತು. ಸದ್ಯ ಅವರನ್ನು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ (ಕೆಎಸ್‍ಆರ್ ಪಿ) ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಕೆಎಸ್‍ಆರ್ ಪಿ ಎಡಿಜಿಪಿಯಾಗಿದ್ದ ಭಾಸ್ಕರ್ ರಾವ್ ಅವರನ್ನು ಪೊಲೀಸ್ ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿದೆ.