ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದ ಕಾರ್ ಡ್ರಿಫ್ಟಿಂಗ್? – ಪೊಲೀಸರಿಂದ ಲ್ಯಾಂಬೊರ್ಗಿನಿ ಸೀಜ್‌

1 Min Read

ಬೆಂಗಳೂರು: ನಗರದ (Bengaluru) ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಐಷಾರಾಮಿ ಕಾರು ಡ್ರಿಫ್ಟಿಂಗ್ ಪ್ರಕರಣಕ್ಕೆ (Car Drifting Case) ಸಂಬಂಧಿಸಿದಂತೆ ಲ್ಯಾಂಬೊರ್ಗಿನಿ (Lamborghini) ಕಾರನ್ನು ಕಬ್ಬನ್ ಪಾರ್ಕ್ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕಾರು ಡ್ರಿಫ್ಟಿಂಗ್‌ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ರಿಕ್ಕಿ ರೈಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಅಲ್ಲದೇ ಕಾರಿನ ದಾಖಲೆಗಳು ಯಾರ ಹೆಸರಿನಲ್ಲಿವೆ ಎಂದು ಪರಿಶೀಲಿಸಲು ಆರ್‌ಟಿಒಗೆ ಪೊಲೀಸರು ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಮುಂದುವರಿದ ಐಷಾರಾಮಿ ಕಾರುಗಳ ದರ್ಬಾರ್ – ರಾಜಾರೋಷವಾಗಿ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್

ರಿಕ್ಕಿ ರೈ ಡ್ರಿಫ್ಟಿಂಗ್ ಮಾಡಿರೊ ಬಗ್ಗೆ ಸಿಸಿಟಿವಿಗಳ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಎರಡು ಮೂರು ಬಾರಿ ಕಾರ್ ಡ್ರಿಫ್ಟಿಂಗ್ ಮಾಡಲಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಇದನ್ನೂ ಓದಿ: ಐತಿಹಾಸಿಕ ಮಲ್ಲೇಶ್ವರ ಗುಡ್ಡಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು

Share This Article