ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ- ಪಿಂಪ್ ಅರೆಸ್ಟ್

Public TV
1 Min Read

-ಮೂವರು ಯುವತಿಯರ ರಕ್ಷಣೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ನಡೆಸುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಓರ್ವ ಪಿಂಪ್‍ನನ್ನು ಬಂಧಿಸಿದ್ದಾರೆ.

ಮಂಡ್ಯ ಮೂಲದ ಪ್ರವೀಣ್ ಬಂಧಿತ ಪಿಂಪ್. ಆರೋಪಿ ಪ್ರವೀಣ್ ನಾಗರಭಾವಿಯ ಬಾಡಿಗೆ ಮನೆಯೊಂದರಲ್ಲಿ ದಂಧೆ ನಡೆಸುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಪಡೆದ ಸಿಸಿಬಿ ತಂಡವು ಎಸಿಪಿ ಮೋಹನ್ ಕುಮಾರ್ ಅವರ ನೇತೃತ್ವದಲ್ಲಿ ದಾಳಿ ನಡೆಸಿತ್ತು. ಈ ವೇಳೆ ಪ್ರವೀಣ್ ಬಲೆಗೆ ಬಿದ್ದಿದ್ದಾನೆ.

ಈ ದಾಳಿಯಲ್ಲಿ ಮಾಗಡಿ ಹಾಗೂ ಕುಣಿಗಲ್ ಮೂಲದ ಮೂವರು ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ. ಆರೋಪಿ ಪ್ರವೀಣ್‍ನನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಡಿಸಿದ್ದಾರೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Share This Article
Leave a Comment

Leave a Reply

Your email address will not be published. Required fields are marked *