ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಪೊಲೀಸರ ವಿರುದ್ಧ ಎಫ್‌ಐಆರ್‌ಗೆ ಶಿಫಾರಸು

Public TV
2 Min Read

– ಸರ್ಕಾರಕ್ಕೆ ನ್ಯಾ. ಮೈಕಲ್ ಕುನ್ಹಾ ಸಲ್ಲಿಸಿದ ವರದಿಯಲ್ಲಿ ಸ್ಫೋಟಕ ಅಂಶ ಬಯಲು

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿರುವ ಪ್ರಕರಣ ಸಂಬಂಧ ಸರ್ಕಾರಕ್ಕೆ ಸಲ್ಲಿಸಿದ ನ್ಯಾ. ಮೈಕಲ್ ಕುನ್ಹಾ ((Michael Cunha) ಅವರ ವರದಿಯಲ್ಲಿ ಮತ್ತಷ್ಟು ಸ್ಫೋಟಕ ಅಂಶ ಬಹಿರಂಗವಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ (Chinnaswamy Stadium Stampede) ಪ್ರಕರಣ ಸಂಬಂಧ ಕರ್ತವ್ಯ ಲೋಪ ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆಗೆ ಶಿಫಾರಸು ಮಾಡಿದೆ. ಆರ್‌ಸಿಬಿ, ಡಿಎನ್‌ಎ, ಕೆಎಸ್‌ಸಿಎ ಮತ್ತು ಪೊಲೀಸರ ವಿರುದ್ಧ ದಂಡನೀಯ ಪ್ರಕರಣ ದಾಖಲು ಮಾಡಬಹುದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ದುಪ್ಪಟ್ಟು ಹಣ ವಸೂಲಿ – ಒಂದೇ ವಾರದಲ್ಲಿ ಸಾವಿರಕ್ಕೂ ಹೆಚ್ಚು ಆಟೋ ಸೀಜ್

ಘಟನೆಗೆ ಕೆಎಸ್‌ಸಿಎ, ಡಿಎನ್‌ಎ, ಆರ್‌ಸಿಬಿ ಹಾಗೂ ಪೊಲೀಸರು ನೇರ ಹೊಣೆಯಾಗಿದ್ದಾರೆ. ಕಾರ್ಯಕ್ರಮ ನಡೆಸುವುದು ಅಸಾಧ್ಯವೆಂದು ಗೊತ್ತಿದ್ದರೂ ಎಲ್ಲರೂ ಶಾಮೀಲಾಗಿ ಕಾರ್ಯಕ್ರಮ ನಡೆಸಿದರು. ಈ ಎಲ್ಲರ ಕರ್ತವ್ಯ ಲೋಪ, ನಿರ್ಲಕ್ಷ್ಯತನದ ಪರಮಾವಧಿ ಎದ್ದು ಕಾಣುತ್ತಿದೆ. ಬಂದೋಬಸ್ತ್ ವ್ಯವಸ್ಥೆ ಸಮರ್ಪಕವಾಗಿರಲಿಲ್ಲ ಎಂಬ ವಿಚಾರ ತನಿಖೆಯಲ್ಲಿ ಬಯಲಾಗಿದೆ. ಇದನ್ನೂ ಓದಿ: ವೈಟ್‌ ಡ್ರೆಸ್‌ನಲ್ಲಿ ಚೈತ್ರಾ ಬ್ರೈಟ್‌ – ಚುಮು ಚುಮು ಚಳಿಯಲ್ಲಿ ಪಡ್ಡೆಗಳ ಮೈಬಿಸಿ ಹೆಚ್ಚಿಸಿದ ನಟಿಯ ಲುಕ್

ಅಲ್ಲದೇ ಕ್ರೀಡಾಂಗಣದ ಒಳಗೆ 79 ಪೊಲೀಸರು ಮಾತ್ರ ಇದ್ದರು. ಹೊರಗೆ ಪೊಲೀಸರು ಇರಲಿಲ್ಲ. ತುರ್ತು ವಾಹನ, ಅಂಬುಲೆನ್ಸ್ ವ್ಯವಸ್ಥೆ ಅಪೂರ್ಣವಾಗಿತ್ತು. 3:25ಕ್ಕೆ ಕಾಲ್ತುಳಿತ ಸಂಭವಿಸಿದ್ದರೂ. 5:30ರವರೆಗೆ ಪೊಲೀಸ್ ಕಮಿಷನರ್‌ಗೆ ಮಾಹಿತಿ ಇಲ್ಲ. 4 ಗಂಟೆಗೆ ಜಂಟಿ ಪೊಲೀಸ್ ಅಯುಕ್ತರು ಕ್ರೀಡಾಂಗಣಕ್ಕೆ ಬಂದಿದ್ದರು.

ಈ ವರದಿಯನ್ನು ಸರ್ಕಾರದ ಸಚಿವ ಸಂಪುಟ ಅಂಗೀಕರಿಸಿದರೆ ದಾಖಲಾಗಿರುವ ಪ್ರಕರಣದಲ್ಲಿ ಈ ಅಧಿಕಾರಿಗಳನ್ನು ಆರೋಪಿಗಳಾಗಿ ಸೇರಿಸುವುದು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮವನ್ನು ಮಾಡಿದ್ದು ಸರಿಯಲ್ಲ. ಗೇಟ್‌ಗಳು ಅತ್ಯಂತ ಚಿಕ್ಕದಾಗಿತ್ತು. ಕ್ರೀಡಾಂಗಣದಲ್ಲಿ ಫೈರ್ ಸೇಫ್ಟಿ ವ್ಯವಸ್ಥೆ ಇರಲಿಲ್ಲ. 1,650 ಪೊಲೀಸ್ ಅಧಿಕಾರಿಗಳು ಭದ್ರತೆಗೆ ನಿಯೋಜನೆ ಆಗಿತ್ತು ಎಂಬುದು ಸುಳ್ಳು. 800ಕ್ಕಿಂತ ಕಡಿಮೆ ಜನರ ಭದ್ರತೆಗೆ ನಿಯೋಜನೆ ಆಗಿದ್ದರು ಎಂದು ವರದಿಯಲ್ಲಿ ತಿಳಿದುಬಂದಿದೆ. ಇದನ್ನೂ ಓದಿ: Uttara Kannada | ದಟ್ಟ ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸ – ರಷ್ಯಾ ಮೂಲದ ವಿದೇಶಿ ಮಹಿಳೆಯ ರಕ್ಷಣೆ

ಸಂಜೆ 5:30ರ ಬಳಿಕ ಯಾವುದೇ ಅಹಿತಕರ ಘಟನೆ ನಡೆದಿಲ್ಲ. 5:30ಕ್ಕೆ ವಿಧಾನಸೌಧದ ಬಳಿಯ ಕಾರ್ಯಕ್ರಮ ಮುಗಿದಿದೆ. ವಿಧಾನಸೌಧದ ಬಳಿ ಇದ್ದ ಜನ ಸ್ಟೇಡಿಯಂ ಬಳಿ ಬಂದಿಲ್ಲ. ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಹಾಗೂ ಪೊಲೀಸರ ವಿರುದ್ಧ ಎಫ್‌ಐಆರ್‌ಗೆ ಕುನ್ಹಾ ವರದಿಯಲ್ಲಿ ಶಿಫಾರಸು ಮಾಡಲಾಗಿದೆ.

Share This Article