ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿ ಹೆಚ್‌ಡಿಕೆ ನೇಮಕ ಪುರಸ್ಕಾರ – ಕೋರ್ಟ್‌ನಿಂದ ಸಿಎಂ ಇಬ್ರಾಹಿಂ ಅರ್ಜಿ ವಜಾ

Public TV
1 Min Read

ಬೆಂಗಳೂರು: ಜೆಡಿಎಸ್ (JDS) ಪಕ್ಷದ ಅಧ್ಯಕ್ಷ ಸ್ಥಾನದಿಂದ ತಮ್ಮನ್ನು ಉಚ್ಚಾಟನೆ ಮಾಡಿರುವ ಕ್ರಮ ಹಾಗೂ ನೂತನ ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಿಎಂ ಇಬ್ರಾಹಿಂ ಅರ್ಜಿಯನ್ನು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಜಾ ಮಾಡಿದೆ.

ನ್ಯಾಯಾಲಯವು ಶುಕ್ರವಾರ ಇಬ್ರಾಹಿಂ (C.M.Ibrahim) ಅವರ ಅರ್ಜಿಯನ್ನು ವಜಾ ಮಾಡಿದ್ದು, ಅವರ ಅರ್ಜಿಯನ್ನು ಪುರಸ್ಕಾರ ಮಾಡಿಲ್ಲ. ಹೆಚ್‌ಡಿಕೆ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದನ್ನು ಪುರಸ್ಕಾರ ಮಾಡಿದೆ. ಇದನ್ನೂ ಓದಿ: ಬಿಜೆಪಿಗೆ ಪ್ರಜಾತಂತ್ರ, ಸಂವಿಧಾನದ ಮೇಲೆ ನಂಬಿಕೆ ಇಲ್ಲ – ಸರ್ವಾಧಿಕಾರದಲ್ಲಿ ಮಾತ್ರ ನಂಬಿಕೆ: ಸಿಎಂ ವಾಗ್ದಾಳಿ

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್‌.ಡಿ.ದೇವೇಗೌಡ (H.D.Deve Gowda) ಅವರು ನಿಯಮಗಳಿಗೆ ವಿರುದ್ಧವಾಗಿ ತಮ್ಮನ್ನು ರಾಜ್ಯಾಧ್ಯಕ್ಷ ಹುದ್ದೆಯಿಂದ ವಜಾ ಮಾಡಿದ್ದರು ಎಂದು ಇಬ್ರಾಹಿಂ ಅವರು ದೂರಿದ್ದರು. ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಜೆಡಿಎಸ್‌ ಪಕ್ಷದಿಂದ ಇಬ್ರಾಹಿಂ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರು ಉಚ್ಚಾಟನೆ ಮಾಡಿದ್ದರು.

ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾ ಮಾಡಿದ್ದು ಸರಿಯಿಲ್ಲ ಎಂದು ಸಿಎಂ ಇಬ್ರಾಹಿಂ ಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ ನ್ಯಾಯಾಲಯ ಅವರ ಅರ್ಜಿ ವಜಾ ಮಾಡಿದೆ. ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ನೇಮಕವನ್ನು ಕೋರ್ಟ್‌ ಎತ್ತಿ ಹಿಡಿದಿದೆ. ಇದನ್ನೂ ಓದಿ: ಕಾಂಗ್ರೆಸ್‌ನವರು ತೆರಿಗೆ ಕಟ್ಟದೇ ತಮ್ಮ ತಪ್ಪು ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಆರೋಪ ಮಾಡ್ತಿದ್ದಾರೆ: ಬೊಮ್ಮಾಯಿ

Share This Article