ಸೆ.17 ರವರೆಗೆ ದರ್ಶನ್‌, ಮರ್ಡರ್‌ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ

Public TV
1 Min Read

ಬೆಂಗಳೂರು: ದರ್ಶನ್‌ (Darshan) ಮತ್ತು ಗ್ಯಾಂಗ್‌ ಸದಸ್ಯರ ನ್ಯಾಯಾಂಗ ಬಂಧನ (Judicial Custody) ಅವಧಿ ಸೆ.17ವರೆಗೆ ವಿಸ್ತಣೆಯಾಗಿದೆ.

ಇಂದು ನ್ಯಾಯಾಂಗ ಬಂಧನದ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.

ಪವಿತ್ರಾ ಗೌಡ, ದರ್ಶರ್ನ್‌ ಸೇರಿದಂತೆ ಎಲ್ಲಾ ಆರೋಪಿಗಳ ಹೆಸರನ್ನು ನ್ಯಾಯಾಧೀಶರು ಕರೆದಾಗ ಆರೋಪಿಗಳು ಎಸ್‌ ಸರ್‌ ಎಂದು ಹೇಳಿ ವಿಚಾರಣೆಗೆ ಹಾಜರಾಗಿರುವುದನ್ನು ದೃಢೀಕರಿಸಿದರು.  ಇದನ್ನೂ ಓದಿ: ಜಾಮೀನು ಅರ್ಜಿಯನ್ನು ಹಿಂದಕ್ಕೆ ಪಡೆದ ಪವಿತ್ರಾ ಗೌಡ

ಈ ವೇಳೆ ಸಂಪೂರ್ಣ ಚಾರ್ಜ್‌ಶೀಟ್‌ ನೀಡಬೇಕು. ಎಲೆಕ್ಟ್ರಾನಿಕ್ಸ್‌ ಸಾಕ್ಷ್ಯಗಳನ್ನು ಒಂದು ವಾರದಲ್ಲಿ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದರು. ಆದರೆ ಇನ್ನೂ ನೀಡಿಲ್ಲ ಎಂದು ಆರೋಪಿಗಳ ಪರ ವಕೀಲರು ಕೋರ್ಟ್‌ ಗಮನಕ್ಕೆ ತಂದರು.

ಪ್ರಕರಣಕ್ಕೆ ಸಂಬಂಧಿಸಿದಂತೆ CrPC ಸೆಕ್ಷನ್ 164 ಹೇಳಿಕೆಯನ್ನು ಸರ್ಟಿಫೈ ಕಾಪಿ ಕೊಡುವಂತೆ  ದರ್ಶನ್‌, ಪವಿತ್ರಾ ಗೌಡ ಸಹಾಯಕ ಈ ಪ್ರಕರಣದಲ್ಲಿ ಎ9 ಆರೋಪಿಯಾಗಿರುವ ರಾಜನ ಪರ ವಕೀಲರು ಕೋರ್ಟ್‌ನಲ್ಲಿ ಮನವಿ ಮಾಡಿದರು. ಇದಕ್ಕೆ ನ್ಯಾಯಾಧೀಶರು ಸೆಷನ್ಸ್‌ ಕೋರ್ಟ್‌ನಲ್ಲಿ ಪಡೆದುಕೊಳ್ಳಿ ಎಂದು ಸೂಚಿಸಿದರು.

 

Share This Article