ಮೊದಲ ಕೇಸ್‌ನಲ್ಲೇ ಪ್ರಜ್ವಲ್ ರೇವಣ್ಣಗೆ ಶಾಕ್ – ಹೊಳೆನರಸೀಪುರ ಪ್ರಕರಣದ ಜಾಮೀನು ಅರ್ಜಿ ವಜಾ

Public TV
1 Min Read

ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪ ಪ್ರಕರಣ ದಾಖಲಾಗಿತ್ತು. ಹೊಳೆನರಸೀಪುರ ಟೌನ್ ಠಾಣೆ ಪ್ರಕರಣ ಸಂಬಂಧ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ವಿಚಾರಣೆ ನಡೆಸಿದ 82 ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ ಡಿಸಿಎಂ ಸ್ಥಾನ ಖಾಲಿ ಇಲ್ಲ: ಚಲುವರಾಯಸ್ವಾಮಿ

ಈ ಪ್ರಕರಣದಲ್ಲಿ ಮಾಜಿ ಸಂಸದ ಎಸ್‌ಐಟಿ ಬಂಧನದಲ್ಲಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಮೂರು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಹೊಳೆನರಸೀಪುರ, ಸಿಐಡಿಯಲ್ಲಿ ಎರಡು ಪ್ರಕರಣ ದಾಖಲಾಗಿತ್ತು. ಮೊದಲ ಪ್ರಕರಣದಲ್ಲಿ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ.

ಹೆಚ್.ಡಿ.ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಇಬ್ಬರೂ ಆರೋಪಿಗಳಾಗಿರುವ ಪ್ರಕರಣವಿದು. ಈಗಾಗಲೇ ಹೆಚ್.ಡಿ.ರೇವಣ್ಣ ಜಾಮೀನು ಪಡೆದುಕೊಂಡಿದ್ದಾರೆ. ಮೊದಲು ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣ ದಾಖಲಾಗಿತ್ತು. ನಂತರ ಅತ್ಯಾಚಾರ ಆರೋಪವನ್ನು ಪ್ರಕರಣದಲ್ಲಿ ಸೇರಿಸಲಾಗಿತ್ತು. ಇದನ್ನೂ ಓದಿ: ಹಾಲಿನ ಪ್ಯಾಕೇಟ್‌ನಲ್ಲಿ ಹೆಚ್ಚಳ ಆಗಿರೋ 50ml ಹಾಲನ್ನು ಗ್ರಾಹಕರು ಖರೀದಿ ಮಾಡಲೇಬೇಕು: ಸಿಎಂ

Share This Article