ಪತಿ ಇಲ್ಲ ಅಂತ ಹೇಳಿ ಹೈಫೈ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ – ಇಬ್ಬರು ಅರೆಸ್ಟ್‌

Public TV
1 Min Read

ಬೆಂಗಳೂರು: ಉದ್ಯೋಗದಾಸೆ ತೋರಿಸಿ ಯುವತಿಯರನ್ನು ವೇಶ್ಯಾವಟಿಕೆಗೆ (Prostitution) ಬಳಕೆ ಮಾಡುತ್ತಿದ್ದ ಇಬ್ಬರು ಮಹಿಳೆಯನ್ನು ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ.

ಉಮಾ, ಪುಷ್ಪಲತಾ ಬಂಧಿತ ಆರೋಪಿಗಳು. ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಬಿಇಎಲ್ ಬಡವಾಣೆಯಲ್ಲಿ ಹೈ ಫೈ ಮನೆ ಬಾಡಿಗೆ ಪಡೆದಿದ್ದ ಆರೋಪಿಗಳು ಈ ಕೃತ್ಯ ನಡೆಸುತ್ತಿದ್ದರು.

ಮನೆ ಮಾಲೀಕರ ಬಳಿ ಪತಿ ಇಲ್ಲಎಂದು ಮನೆಯನ್ನು ಬಾಡಿಗೆಗೆ ಪಡೆಯುತ್ತಿದ್ದ ಇವರು ಹೊರ ರಾಜ್ಯದಿಂದ ಬರುವ ಯುವತಿಯರಿಗೆ ಉದ್ಯೋಗದ (Job) ಆಸೆ ತೋರಿಸಿ ವೇಶ್ಯವಾಟಿಕೆ ದಂಧೆಗೆ ದೂಡುತ್ತಿದ್ದರು. ಗಿರಾಕಿಗಳನ್ನ ಫೋನ್ ಮೂಲಕ ಸಂಪರ್ಕ ಮಾಡಿ ಫೋಟೋಗಳನ್ನು ಕಳುಹಿಸಿ ಡೀಲ್ ಮಾಡುತ್ತಿದ್ದರು. ಇದನ್ನೂ ಓದಿ: ಹಾಸನದಲ್ಲಿ ಪುಡಿ ರೌಡಿಯ ಕಾಟ | ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ

ಖಚಿತ ಮಾಹಿತಿ ಪಡೆದ ಸಿಸಿಬಿ ಮಹಿಳಾ ಸಂರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿ ಓರ್ವ ಯುವತಿಯನ್ನು ರಕ್ಷಿಸಿ ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಅನೇಕ ಭಾಗಗಳಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ ನಡೆಸಿದೆ. ಸಂಪಿಗೇಹಳ್ಳಿ, ಕೆಆರ್ ಪುರಂ, ರಾಮಮೂರ್ತಿ ನಗರ, ಹನುಮಂತ ನಗರ ಠಾಣಾ ವ್ಯಾಪ್ತಿಯ ಐಷಾರಾಮಿ ಹೋಟೆಲ್, ಅಪಾರ್ಟ್‌ಮೆಂಟ್‌ ಮನೆಗಳಲ್ಲಿ ದಂಧೆ ನಡೆಸುತ್ತಿದ್ದ 4 ಆರೋಪಿಗಳನ್ನು ಬಂಧಿಸಿ 9 ಮಹಿಳೆಯರನ್ನು ರಕ್ಷಿಸಿದ್ದಾರೆ.

Share This Article