ಸಿಲಿಕಾನ್ ಸಿಟಿಯಲ್ಲಿ ಚುಮುಚುಮು ಮಳೆ – ನಾಳೆಯೂ ಮಳೆ ಸಾಧ್ಯತೆ

Public TV
1 Min Read

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ, ಇಂದು (ಸೋಮವಾರ) ನಗರದ (Bengaluru) ಹಲವೆಡೆ ಮೋಡ ಕವಿದ ವಾತಾವರಣ ಇದ್ದು, ರಾಜಧಾನಿಯ ಹಲವು ಭಾಗಗಳಲ್ಲಿ ಹಗುರ ಮಳೆಯಾಗಿದೆ. ಮಂಗಳವಾರ ಸಹ ಕೆಲವೆಡೆ ಮಳೆ (Rain) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 24 ಗಂಟೆಗಳ ಕಾಲ ನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಅಲ್ಲದೇ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ರಾಮನಗರದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗಲಿದೆ. ದಕ್ಷಿಣ ಒಳನಾಡು ಭಾಗದಲ್ಲಿ ಮೋಡ ಕವಿದ ವಾತಾವರಣ ಹಾಗೂ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಓದಿ: ದತ್ತಪೀಠದ ಗೋರಿ ಧ್ವಂಸ ಪ್ರಕರಣ – ನ್ಯಾಯಾಲಯಕ್ಕೆ ಹಾಜರಾದ 14 ಹಿಂದೂ ಕಾರ್ಯರ್ತರು

ಶ್ರೀಲಂಕಾದ ದಕ್ಷಿಣ ಭಾಗದಿಂದ ತಮಿಳುನಾಡಿನ ಉತ್ತರ ಕರಾವಳಿ ಕಡೆಗೆ ಸೀ ಟ್ರಫ್ ಹಾಯುತ್ತಿದ್ದು, ಸುಮಾರು ಸಮುದ್ರ ಮಟ್ಟದಿಂದ 900ಮೀಟರ್ ಎತ್ತರದಲ್ಲಿ ಹಾದು ಹೋಗಲಿದೆ. ಇದರಿಂದ ರಾಜ್ಯದ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ದೇವಸ್ಥಾನದ ಹಾದಿ ಮಾನಸಿಕ ಗುಲಾಮಗಿರಿಯ ಹಾದಿ – ರಾಮಮಂದಿರ ಕುರಿತು ಶಿಕ್ಷಣ ಸಚಿವ ವಿವಾದಾತ್ಮಕ ಹೇಳಿಕೆ

Share This Article