ಬೆಂಗಳೂರು: ರಾಜ್ಯ ಸರ್ಕಾರ ಜನರ ಜೀವದ ಜೊತೆ ಆಟವಾಡುತ್ತಿದೆಯಾ? ಸರ್ಕಾರವೇ ಕೊರೊನಾ ಸೋಂಕು ಹರಡಿಸುತ್ತಿದೆಯಾ ಎಂಬ ಅನುಮಾನ ಶುರುವಾಗಿದೆ.
ಹೌದು, ಸರ್ಕಾರ ನೀಡುತ್ತಿರುವ ಉಚಿತ ಹಾಲು ಪಡೆಯಲು ಜನರು ಕಿಲೋ ಮೀಟರ್ ಗಟ್ಟಲೇ ಕ್ಯೂ ನಿಲ್ಲುತ್ತಿದ್ದಾರೆ. ಕೆಲವೊಮ್ಮೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದ ಪ್ರಸಂಗಗಳು ವರದಿಯಾಗಿವೆ. ಇಂತಹದ್ದೇ ಸನ್ನಿವೇಶವೊಂದು ಇಂದು ಮಲ್ಲೇಶ್ವರಂನ ದತ್ತಾತ್ರೇಯ ವಾರ್ಡ್ ನಲ್ಲಿ ನಡೆದಿದೆ.
ಮಲ್ಲೇಶ್ವರಂನ ದತ್ತಾತ್ರೇಯ ವಾರ್ಡ್‍ನಲ್ಲಿ ಕಳೆದ ಕೆಲವು ದಿನಗಳಿಂದ ಬೆಳಗ್ಗೆ 7 ಗಂಟೆಗೆ ಉಚಿತ ಹಾಲು ವಿತರಣೆ ಮಾಡಲಾಗುತ್ತಿದೆ. ಈ ಹಾಲನ್ನು ಪಡೆಯಲು ಜನರು ಬೆಳಗ್ಗೆ 5 ಗಂಟೆಗೆ ಕ್ಯೂ ನಿಲ್ಲುತ್ತಿದ್ದಾರೆ. ಇಂದು ಕೂಡ ಉಚಿತ ಹಾಲು ಪಡೆಯಲು ಒಂದೂವರೆ ಕಿ.ಮೀ ಕ್ಯೂ ಉಂಟಾಗಿತ್ತು. ಅಷ್ಟೇ ಅಲ್ಲದೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮಹಿಳೆಯರು, ಮಕ್ಕಳು, ವೃದ್ಧರು ಸೇರಿದಂತೆ ನೂರಾರು ಜನರು ಕ್ಯೂನಲ್ಲಿ ನಿಂತಿದ್ದರು.