ಬೆಂಗಳೂರು: ಗುರುವಾರ ತುಮಕೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ರಾಜಭವನದಲ್ಲೇ ವಾಸ್ತವ್ಯ ಹೂಡಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಜಿಕೆವಿಕೆಗೆ ತೆರಳಲಿದ್ದಾರೆ.
ಇಂದಿನಿಂದ ಆರಂಭಗೊಳ್ಳಲಿರುವ 107ನೇ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಬಳಿಕ ಹೆಚ್‍ಎಎಲ್‍ಗೆ ತೆರಳಿ ಅಲ್ಲಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಇದನ್ನೂ ಓದಿ: ಸಿಎಂ ಕೈಮುಗಿದು ಮನವಿ ಮಾಡಿದ್ರೂ ನೆರೆ ಪರಿಹಾರದ ಬಗ್ಗೆ ಏನೂ ಮಾತನಾಡದ ಮೋದಿ
ಕೆ.ಎಸ್.ಓ.ಯು ಅವ್ಯವಹಾರ ಪ್ರಕರಣದಲ್ಲಿ ಆರೋಪಿಯಾಗಿರುವ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಧ್ಯಕ್ಷ ಪ್ರೊ ಕೆ.ಎಸ್ ರಂಗಪ್ಪ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು. ಆದರೆ ನಿನ್ನೆ ಅರ್ಜಿ ವಿಚಾರಣೆ ನಡೆಸಿದ ಮೈಸೂರಿನ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಜಾಮೀನು ತಿರಸ್ಕರಿಸಿದೆ. ಹೀಗಾಗಿ ಇಂದಿನ ಕಾರ್ಯಕ್ರಮದಲ್ಲಿ ರಂಗಪ್ಪ, ಮೋದಿ ಜೊತೆ ವೇದಿಕೆ ಹಂಚಿಕೊಳ್ಳುವುದು ಅನುಮಾನವಾಗಿದೆ. ಇದನ್ನೂ ಓದಿ: ತುಮಕೂರಿನಲ್ಲಿ ಸಂತರ ಮುಂದೆ ಮೂರು ಸಂಕಲ್ಪವಿಟ್ಟ ಮೋದಿ