ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದವರ ವಿರುದ್ಧ ಸಮರ ಸಾರಿದ್ದ ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಈಗ ಏಕಮುಖ ಸಂಚಾರ ಮಾಡುತ್ತಿರುವ (One-way Violations) ವಾಹನ ಸವಾರರ ವಿರುದ್ಧ ದೊಡ್ಡ ಮಟ್ಟದ ಕಾರ್ಯಾಚರಣೆಗೆ ಇಳಿದಿದ್ದಾರೆ.
ಹೌದು. ಕೇವಲ ನಾಲ್ಕು ದಿನದಲ್ಲಿ ಸಂಚಾರಿ ಪೊಲೀಸರು 11,498 ಕೇಸ್ ದಾಖಲಿದ್ದಾರೆ. ಜ.21 ರಿಂದ 24 ರವರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಸಿಸಿಟಿವಿ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ವಾಹನಗಳ ಮಾಲೀಕರಿಗೆ ಬಿಸಿ ಮುಟ್ಟಿಸಿದ್ದಾರೆ.
ಏಕಮುಖ ಸಂಚಾರದಿಂದ ವಾಹನ ದಟ್ಟಣೆ, ಸಂಚಾರಕ್ಕೆ ಸಮಸ್ಯೆ ಆಗುತ್ತಿದೆ ಎಂದು ಪ್ರಯಾಣಿಕರು ಸಂಚಾರ ಪೊಲೀಸರಿಗೆ ದೂರು ನೀಡುತ್ತಿದ್ದರು. ಅಷ್ಟೇ ಅಲ್ಲದೇ ಕಾರಿನ ಡ್ಯಾಶ್‌ಕ್ಯಾಮೆರಾದಲ್ಲಿ ಸೆರೆಯಾಗಿರುವ ವಿಡಿಯೋ ಅಪ್ಲೋಡ್ ಮಾಡಿ ದೂರು ಸಲ್ಲಿಸುತ್ತಿದ್ದರು. ಇದನ್ನೂ ಓದಿ: ಕುಡಿದು ವಾಹನ ಚಾಲನೆ – 11,500 ಚಾಲಕರ ಡಿಎಲ್ ರದ್ದು

