Bengaluru Rain | ನಾನು ನಿಮ್ಮಲ್ಲಿ ಒಬ್ಬ, ನಿಮ್ಮೊಂದಿಗೆ ನಿಲ್ಲುತ್ತೇನೆ: ಡಿಕೆಶಿ

By
2 Min Read

– ವ್ಯಾಪಕ ಟೀಕೆ ಬೆನ್ನಲ್ಲೇ ಡಿಸಿಎಂ ಟ್ವೀಟ್

ಬೆಂಗಳೂರು: ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು(Bengaluru) ತತ್ತರಿಸಿದ್ದು, ಜನ ಬಿಬಿಎಂಪಿ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ನಾನು ನಿಮ್ಮಲ್ಲಿ ಒಬ್ಬ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ ಎಂದು ವ್ಯಾಪಕ ಟೀಕೆಯ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್(D K Shivakumar) ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಳೆಯ ಅವಾಂತರದ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಂಗಳೂರಿನಲ್ಲಿ ನಿರಂತರ ಮಳೆಯಿಂದ ಉಂಟಾದ ಹಾನಿಯಿಂದ ತೀವ್ರ ಕಳವಳಗೊಂಡಿದ್ದೇನೆ. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಾನು ನಿರಂತರ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಸವಾಲುಗಳನ್ನು ಎದುರಿಸಲು ಮತ್ತು ಪರಿಹಾರವನ್ನು ಕೈಗೊಳ್ಳುವ ದಿನದ 24 ಗಂಟೆಗಳೂ ನಾನು ಕೆಲಸ ಮಾಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಳೆಯ ಅವಾಂತರ – ಸಾಯಿ ಲೇಔಟ್‌ಗೆ ಜಲದಿಗ್ಭಂದನ

ನಾನು ಬಿಬಿಎಂಪಿ(BBMP) ವಾರ್ ರೂಮ್ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ವೈಯಕ್ತಿಕವಾಗಿ ಭೇಟಿ ನೀಡಿ ವಾಸ್ತವಿಕವಾಗಿ ಮಾಹಿತಿ ಪಡೆಯುತ್ತೇನೆ. ಇವತ್ತು ನಾವು ಎದುರಿಸುತ್ತಿರುವ ಸಮಸ್ಯೆಗಳು ಹೊಸದೇನಲ್ಲ. ಹಲವು ಸರ್ಕಾರಗಳ, ಹಲವು ವರ್ಷಗಳ ನಿರ್ಲಕ್ಷತನ ಈ ಸಮಸ್ಯೆ ಎದುರಿಸುತ್ತಿದ್ದೇವೆ. ಈ ಸಮಸ್ಯೆಯನ್ನು ಪರಿಹರಿಸಲು ಕೆಲಸ ಮಾಡುತ್ತಿದ್ದೇನೆ. ತಾತ್ಕಾಲಿಕ ಪರಿಹಾರ ಅಲ್ಲ, ದೀರ್ಘಕಾಲಿಕ ಪರಿಹಾರ ಕೈಗೊಳ್ಳು ಕೆಲಸ ಮಾಡ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಾನ್ಯತಾ ಟೆಕ್‌ ಪಾರ್ಕ್‌ ಜಲಾವೃತ – ಪರ್ಯಾಯ ಮಾರ್ಗ ಬಳಸುವಂತೆ ಮನವಿ

ನನ್ನೆಲ್ಲಾ ಬೆಂಗಳೂರಿಗರೇ, ನಾನು ನಿಮ್ಮಲ್ಲಿ ಒಬ್ಬ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ. ನಿಮ್ಮ ಕಳವಳ ಅರ್ಥಮಾಡಿಕೊಳ್ತೇನೆ. ಹತಾಶೆಯನ್ನು ಹಂಚಿಕೊಳ್ಳುತ್ತೇನೆ. ಬೆಂಗಳೂರಿನ ಈ ಸಮಸ್ಯೆಯನ್ನು ಪರಿಹರಿಸಲು ನಾನು ಬದ್ಧನಾಗಿದ್ದು, ಈ ಬಗ್ಗೆ ನಾನು ಭರವಸೆ ನೀಡುತ್ತೇನೆ. ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಸಿಸಿಬಿ ಕಚೇರಿ ಜಲಾವೃತ | ಬೊಮ್ಮನಹಳ್ಳಿ -ಸಿಲ್ಕ್ ಬೋರ್ಡ್ ರಸ್ತೆಯಲ್ಲಿ 3 ಅಡಿ ನೀರು

ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರಿನ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಅಲ್ಲದೇ ರಸ್ತೆಗಳಲ್ಲಿ ನೀರು ತುಂಬಿದ್ದು ವಾಹನ ಸವಾರರು ಪರದಾಡುತಿದ್ದಾರೆ. ಇನ್ನು ಹಲವೆಡೆ ಮನೆಗಳಿಗೆ ನೀರು ನುಗ್ಗಿ ಜನ ಮನೆಯಿಂದ ಹೊರಬರಲಾದೆ ತೊಂದರೆ ಅನುಭವಿಸುತ್ತಿದ್ದು, ಸರ್ಕಾರ ಹಾಗೂ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಜನ ಕಿಡಿಕಾರುತ್ತಿದ್ದಾರೆ.

Share This Article