ಬೆಂಗಳೂರಿನಲ್ಲಿ ತುಂತುರು ಮಳೆ – ಯಲಹಂಕದಲ್ಲಿ 7 ಕಾರುಗಳು ಡಿಕ್ಕಿ

Public TV
0 Min Read

ಬೆಂಗಳೂರು: ತುಂತುರು ಮಳೆ, ಇಬ್ಬನಿ ಮಧ್ಯೆ ಬೆಂಗಳೂರಿನಲ್ಲಿ ಸರಣಿ ಅಪಘಾತ ಸಂಭವಿಸಿದೆ.

ಯಲಹಂಕಕ್ಕೆ ತೆರಳುವ ಮುಖ್ಯರಸ್ತೆಯಲ್ಲಿ 7 ಕಾರುಗಳು ಡಿಕ್ಕಿ ಹೊಡೆದಿವೆ. ಸದ್ಯ ಹೆಚ್ಚಿನ ಅನಾಹುತ ಸಂಭವಿಸಿಲ್ಲ.  ಇದನ್ನೂ ಓದಿ: ಇಂದು ಸೇರಿ ಇನ್ನೂ 4 ದಿನ ಬೆಂಗಳೂರಿನಲ್ಲಿ ಭಾರೀ ಮಳೆ

 

ಸರಣಿ ಅಪಘಾತ ಹಿನ್ನೆಲೆಯಲ್ಲಿ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ಫ್ಲೈ ಓವರ್ ಬಳಿ ವಾಹನಗಳು ಸಾಲುಗಟ್ಟಿ ನಿಂತಿವೆ. ನಿಧಾನಗತಿಯಲ್ಲಿ ವಾಹನಗಳು ಸಂಚರಿಸುತ್ತಿವೆ.

ಇಂದೂ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಇನ್ನೂ 4 ದಿನ ಭಾರೀ ಮಳೆಯಾಗಲಿದೆ.

 

Share This Article