ಮೋದಿ ಜೊತೆ ಗಣರಾಜ್ಯೋತ್ಸವ ವೀಕ್ಷಿಸಲು ಬೆಂಗ್ಳೂರು ವಿದ್ಯಾರ್ಥಿನಿಗೆ ಬಂತು ಆಹ್ವಾನ

Public TV
1 Min Read

ಬೆಂಗಳೂರು: ಸಿಲಿಕಾನ್ ಸಿಟಿಯ ವಿದ್ಯಾರ್ಥಿನಿಯೊಬ್ಬಳು ಈ ಬಾರಿ ಪ್ರಧಾನಿ ಮೋದಿ ಜೊತೆ ಗಣರಾಜ್ಯೋತ್ಸವ ವೀಕ್ಷಿಸಲಿದ್ದಾಳೆ. ಇದೇ 26ರಂದು ನಡೆಯುವ ಗಣರಾಜ್ಯೋತ್ಸವ ಪರೇಡ್ ಸಮಾರಂಭದಲ್ಲಿ ಭಾಗಿಯಾಗಲು ಬೆಂಗಳೂರಿನ ವಿದ್ಯಾರ್ಥಿನಿಗೆ ದೆಹಲಿಯ ಮಾನವ ಸಂಪನ್ಮೂಲ ಇಲಾಖೆಯಿಂದ ಆಹ್ವಾನ ಬಂದಿದೆ.

ನಗರದ ಗೋಕುಲ್ ಎಕ್ಸ್ ಟೆನ್ಶನ್ ನಲ್ಲಿರುವ ನವ್ಕೀಸ್ ಶಾಲೆಯಲ್ಲಿ ಓದುತ್ತಿರುವ ದೇವಿಕಾ ಸಂತೋಷ್ ಪ್ರಧಾನ ಮಂತ್ರಿ ಬಾಕ್ಸ್ ನಲ್ಲಿ ಕುಳಿತು ಗಣರಾಜ್ಯೋತ್ಸವ ಪರೇಡ್ ವೀಕ್ಷಣೆ ಮಾಡಲಿದ್ದಾಳೆ.

ಕಳೆದ ವರ್ಷ ಸಿಬಿಎಸ್‍ಸಿಯ 10ನೇ ತರಗತಿಯಲ್ಲಿ ದೇಶದಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಲ್ಲಿ ದೇವಿಕಾ ಒಬ್ಬಳಾಗಿದ್ದಳು. ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಮಾನವ ಸಂಪನ್ಮೂಲ ಸಚಿವಾಲಯದಿಂದ ಈ ವಿಶೇಷ ಆಹ್ವಾನ ಬಂದಿದೆ.

ಪ್ರತಿ ವರ್ಷ ನೂರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ಆಹ್ವಾನ ಬರುತ್ತದೆ. ಇದರಿಂದ ಪ್ರತಿಭಾವಂತ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಿದಂತಾಗುತ್ತದೆ ಎಂದು ದೇವಿಕಾ ಕುಟುಂಬಸ್ಥರು, ಸ್ನೇಹಿತರು ಹಾಗೂ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ದೇವಿಕಾ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ, “ನನಗೆ 10ನೇ ತರಗತಿಯ ಸಿಬಿಎಸ್‍ಸಿ ಪರೀಕ್ಷೆಯಲ್ಲಿ ಶೇ. 99.2 ಅಂಕಗಳು ಬಂದಿತ್ತು. ನನಗೆ 10ನೇ ತರಗತಿಯ ಸಿಬಿಎಸ್‍ಸಿ ಪರೀಕ್ಷೆಯಲ್ಲಿ ಶೇ. 99.2 ಅಂಕಗಳು ಬಂದಿತ್ತು. ನಮಗೆ ಪ್ರಧಾನಿ ಮೋದಿ ಪರವಾಗಿ ಜಲಸಂಪನ್ಮೂಲ ಇಲಾಖೆಯಿಂದ ಪತ್ರ ಬಂತು. ಗಣರಾಜ್ಯೋತ್ಸವದ ಪರೇಡ್ ನೋಡಬಹುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ನಾನು 26 ಜನವರಿಯಂದು ಉಳಿದ 99 ಮಕ್ಕಳ ಜೊತೆ ಪರೇಡ್ ವೀಕ್ಷಿಸುತ್ತೇನೆ ಎಂದು ಹೇಳಿದ್ದಾಳೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *