ಬೆಂಗಳೂರಿಗೆ ಫೆಬ್ರವರಿಯಲ್ಲೇ ಸಮಸ್ಯೆ – ಶುದ್ದ ಕುಡಿಯುವ ನೀರಿನ ಘಟಕದಲ್ಲಿ ಸಮಯ ನಿಗದಿ

Public TV
1 Min Read

ಬೆಂಗಳೂರು: ಒಂದು ಕಡೆ ಜಲಮಂಡಳಿ (BWSSB) ನೀರು ಸರಬರಾಜಿನಲ್ಲಿ ವ್ಯತ್ಯಯ ಇನ್ನೊಂದು ಕಡೆ ಕೈ ಕೊಟ್ಟ ಶುದ್ಧ ನೀರಿನ ಘಟಕ..ಈ ಪರಿಣಾಮ ಬೆಂಗಳೂರಿಗೆ (Bengaluru) ಫೆಬ್ರವರಿಯಲ್ಲೇ ನೀರಿನ ಸಮಸ್ಯೆ (Water Problem) ಆರಂಭವಾಗಿದೆ.

ನೀರಿನ ಅಭಾವ ಇರುವುದರಿಂದ ಬಹುತೇಕ ಪ್ರದೇಶದಲ್ಲಿ ನೀರು ಪಡೆಯಲು ಶುದ್ದ ಕುಡಿಯುವ ನೀರಿನ ಘಟಕದಲ್ಲಿ ಸಮಯ ನಿಗದಿ ಮಾಡಲಾಗಿದೆ. ಇದನ್ನೂ ಓದಿ: ಕ್ರಿಶ್ಚಿಯನ್‌ ಶಾಲೆ ಮುಂದೆ ಜೈ ಶ್ರೀರಾಮ್ ಘೋಷಣೆ – ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಸೇರಿ ಐವರ ವಿರುದ್ಧ FIR

ಶುದ್ಧ ಕುಡಿಯುವ ನೀರಿನ ಘಟಕಗಳ ಮೇಲೆ ಬೋರ್ಡ್ ಗಳ ಅಳವಡಿಸಿ ನೀರಿನ ಅಲಭ್ಯತೆ ಕುರಿತು ಮಾಹಿತಿ ನೀಡಲಾಗಿದೆ.  ಇದನ್ನೂ ಓದಿ:  ಚುನಾವಣಾ ಬಾಂಡ್‌ಗಳ ಯೋಜನೆ ಅಸಂವಿಧಾನಿಕ: ಸುಪ್ರೀಂ ಕೋರ್ಟ್‌

ನೀರಿನ ಅಭಾವ ಇರುವುದರಿಂದ ಪ್ರತಿದಿನ ಮಧ್ಯಾಹ್ನ 1 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ಮುಚ್ಚಲಾಗುತ್ತದೆ. ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆ ಮತ್ತು ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಾತ್ರ ನೀರಿನ ಲಭ್ಯತೆ ಇದೆ ಎಂಬ ಬೋರ್ಡ್ ಅಳವಡಿಸಲಾಗಿದೆ.

Share This Article