‘ಡಂಕಿ’ ಟೀಸರ್ ಗೆ ‘ಬೆಂಕಿ’ ರೆಸ್ಪಾನ್ಸ್: ಶಾರುಖ್ ಮತ್ತೆ ಗೆಲ್ಲುತ್ತಾರೆ ಎಂದ ಫ್ಯಾನ್ಸ್

Public TV
1 Min Read

ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ (Shahrukh Khan) ನಟನೆಯ ‘ಡಂಕಿ’ (Dunki) ಚಿತ್ರದ ಟೀಸರ್ (Teaser) ನಿನ್ನೆಯಷ್ಟೇ ಬಿಡುಗಡೆ ಆಗಿತ್ತು. ಟೀಸರ್ ಗೆ ಭಾರೀ ರೆಸ್ಪಾನ್ಸ್ ವ್ಯಕ್ತವಾಗಿದೆ. ಶಾರುಖ್ ಅಭಿಮಾನಿಗಳು ಟೀಸರ್ ನೋಡಿ ಕುಣಿದಿದ್ದಾರೆ. ಶಾರುಖ್ ಹೊಡೆದ ಡೈಲಾಗ್ ಗೆ ಸಿಳ್ಳೆ ಹಾಕಿದ್ದಾರೆ. ಸಂಗೀತ ಕೇಳಿ ಕುಣಿದಿದ್ದಾರೆ. ಒಟ್ಟಾರೆ ‘ಡಂಕಿ ಟೀಸರ್ ಗೆ ಬೆಂಕಿ’ ರೆಸ್ಪಾನ್ಸ್ ಸಿಕ್ಕಿದೆ. ಮತ್ತೆ ಶಾರುಖ್ ಗೆಲ್ಲೋದು ಗ್ಯಾರಂಟಿ ಅಂದಿದ್ದಾರೆ ಫ್ಯಾನ್ಸ್.

ಶಾರುಖ್ ಖಾನ್ ಜನ್ಮದಿನದ ಸಂಭ್ರಮದಂದು ಕಿಂಗ್ ಖಾನ್ ಹುಟ್ಟುಹಬ್ಬದ ಸ್ಪೆಷಲ್ ಆಗಿ ಡಂಕಿ ಸಿನಿಮಾದ ಟೀಸರ್ ಉಡುಗೊರೆಯಾಗಿ ಸಿಕ್ಕಿದೆ. ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್  (Rajkumar Hirani) ಹಿರಾನಿ ಡಂಕಿ ಸಿನಿಮಾದ ಸೂತ್ರಧಾರ. ಮುನ್ನಾ ಬಾಯ್ ಎಂಬಿಬಿಎಸ್, 3 ಈಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ಹಿರಾನಿ, ಈ ಬಾರಿ ಐದು ಜನ ಸ್ನೇಹಿತರ ಕಥೆ ಹೇಳೋದಿಕ್ಕೆ ಬರ್ತಿದೆ. ಒಂದೊಳ್ಳೆ ಸಂದೇಶದ ಜೊತೆಗೆ ಮನರಂಜನಾತ್ಮಕ ಅಂಶಗಳನ್ನು ಬೆರೆಸಿ ಹೆಣೆದಿರುವ ಡಂಕಿ ಟೀಸರ್ ಗೆ ಅದ್ಭುತ ರೆಸ್ಪಾನ್ಸ್ ಸಿಕ್ತಿದೆ.

ಶಾರುಖ್ ಖಾನ್ ನಾಯಕನಾಗಿ ನಟಿಸಿದ್ದು, ಬೊಮನ್ ಇರಾನಿ, ತಾಪ್ಸೀ ಪನ್ನು, ವಿಕ್ಕಿ ಕೌಶಲ್, ಅನಿಲ್ ಗ್ರೋವರ್, ವಿಕ್ರಮ್ ಕೊಚ್ಚರ್ ತಾರಾಬಳಗದಲ್ಲಿದ್ದಾರೆ. ಪ್ರೀತಿ ಮತ್ತು ಸ್ನೇಹದ ಕಥೆಯಾಗಿರುವ ಡಂಕಿ ಸಿನಿಮಾವನ್ನು JIO ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ನಡಿ ರಾಜ್‌ಕುಮಾರ್ ಹಿರಾನಿ ಮತ್ತು ಗೌರಿ ಖಾನ್ ನಿರ್ಮಿಸಿದ್ದಾರೆ. ಅಭಿಜಾತ್ ಜೋಷಿ, ರಾಜ್‌ಕುಮಾರ್ ಹಿರಾನಿ ಮತ್ತು ಕನಿಕಾ ಧಿಲ್ಲೋನ್ ಕಥೆ ಬರೆದಿದ್ದಾರೆ. ಡಂಕಿ ಸಿನಿಮಾ ಕ್ರಿಸ್ಮಸ್ ಗೆ ವಿಶ್ವಾದ್ಯಂತ ರಿಲೀಸ್ ಆಗಲಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್