ರಾಮನಗರ: ಡಿಜಿಟಲ್ ಅರೆಸ್ಟ್ (Digital Arrest) ಎಂದು ಬೆದರಿಕೆ ಹಾಕಿ ಲಕ್ಷ ಲಕ್ಷ ಹಣ ದೋಚಿದ್ದಲ್ಲದೇ, ಮತ್ತೆ ಹಣ ಕೊಡುವಂತೆ ಬೆದರಿಕೆ ಹಾಕಿದ ಹಿನ್ನೆಲೆ ಬೆಸ್ಕಾಂ (BESCOM) ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣ (Channapatna) ತಾಲೂಕಿನ ಕೆಲಗೆರೆ ಗ್ರಾಮದಲ್ಲಿ ನಡೆದಿದೆ. ಸೈಬರ್ ವಂಚಕರ ಕಿರುಕುಳದ ಬಗ್ಗೆ ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ನೇಣಿಗೆ ಶರಣಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ.
ಬೆಸ್ಕಾಂ ಸಿಬ್ಬಂದಿ 42 ವರ್ಷದ ಕುಮಾರ್ ಸೈಬರ್ ವಂಚಕರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲದೇ ಕುಮಾರ್ ಡೆತ್‌ನೋಟ್‌ನಲ್ಲಿ ಡಿಜಿಟಲ್ ಅರೆಸ್ಟ್ ಕಿರುಕುಳದ ಬಗ್ಗೆ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಅಡ್ವಾಣಿ ದಂಪತಿಗೆ ಹೆಣ್ಣು ಮಗು ಜನನ
ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಬೆಸ್ಕಾಂ ಹೊರಗುತ್ತಿಗೆ ನೌಕರರನಾಗಿ ಕುಮಾರ್ ಕೆಲಸ ಮಾಡುತ್ತಿದ್ದರು. ವಿಕ್ರಮ್ ಗೋಸ್ವಾಮಿ ಎಂಬಾತ ವೀಡಿಯೋ ಕಾಲ್ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ನೀವು ಡಿಜಿಟಲ್ ಅರೆಸ್ಟ್ ಆಗಿದ್ದೀರಿ ಎಂದು ಬೆದರಿಸಿದ್ದ. ಕೇಸ್‌ನಿಂದ ಕೈಬಿಡಲು ಅಕೌಂಟ್‌ಗೆ ಹಣ ಹಾಕು ಎಂದು ಬೆದರಿಸಿದ್ದ. ಸುಮಾರು 11 ಲಕ್ಷ ಹಣವನ್ನ ತನ್ನ ಅಕೌಂಟ್‌ಗೆ ಹಾಕಿಸಿಕೊಂಡಿದ್ದ. ಆದರೆ ಮತ್ತೆ ಹಣ ನೀಡುವಂತೆ ಬೆದರಿಸಿದ್ದ. ಕಿರುಕುಳಕ್ಕೆ ಬೇಸತ್ತ ಕುಮಾರ್ ಡೆತ್‌ನೋಟ್ ಬರೆದು ನೇಣಿಗೆ ಶರಣಾಗಿದ್ದಾರೆ. ಡೆತ್‌ನೋಟ್‌ನಲ್ಲಿ ತನ್ನ ಅನಾರೋಗ್ಯದ ಬಗ್ಗೆಯೂ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಬೇಕರಿ, ದಿನಸಿ ಅಂಗಡಿಗಳಿಗೆ ಲಕ್ಷ ಲಕ್ಷ ಟ್ಯಾಕ್ಸ್ – ಬಂದ್ ಎಚ್ಚರಿಕೆ ಕೊಟ್ಟ ಮಾಲೀಕರು
ಡೆತ್‌ನೋಟ್‌ನಲ್ಲಿ ಏನಿದೆ?
ವಿಕ್ರಂ ಗೋಸ್ವಾಮಿ, ಸಿಬಿಐ ಅಂತ ನನಗೆ 8109931663ರ ನಂಬರ್‌ನಿಂದ ಫೋನ್ ಮಾಡಿ ನಿನ್ನ ಮೇಲೆ ಅರೆಸ್ಟ್ ವಾರೆಂಟ್ ಇದೆ ಎಂದು ಹೆದರಿಸಿ ನನ್ನ ಅಕೌಂಟಿಗೆ 1,95,000 ರೂ. ಹಾಕು ಎಂದು ಅಕೌಂಟ್ ನಂಬರ್ ಕಳುಹಿಸಿದ್ದು, ನಾನು ಭಯಪಟ್ಟು ಹಣವನ್ನು ಹಾಕಿದೆ. ನಂತರ ಮತ್ತೆ ಫೋನ್ ಮಾಡಿ ಆ ಅಕೌಂಟ್‌ಗೆ ಹಾಕು, ಈ ಅಕೌಂಟ್‌ಗೆ ಹಾಕು ಎಂದು ನನ್ನಿಂದ ಸುಮಾರು 11 ಲಕ್ಷ ಹಾಕಿಸಿಕೊಂಡಿರುತ್ತಾರೆ. ನಂತರ ನನ್ನ ಪರ್ಸನಲ್ ನಂಬರ್ ಹಾಗೂ ವಾಟ್ಸಪ್ ನಂಬರ್‌ಗೆ 9752140613 ಹಾಗೂ 9812177540ರ ನಂಬರಿಗೆ 2,75,000 ರೂ. ಕಳುಹಿಸು ಎಂದು ಕಾಡಿಸುತ್ತಿದ್ದಾರೆ. ಆದ ಕಾರಣ ನನ್ನ ಸಾವನ್ನ ನಾನೇ ತಂದುಕೊಂಡಿದ್ದೇನೆ ಎಂದು ಬರೆಯಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ
ಘಟನೆ ಸಂಬಂಧ ಚನ್ನಪಟ್ಟಣ ತಾಲೂಕಿನ ಎಂ.ಕೆ.ದೊಡ್ಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಡೆತ್‌ನೋಟ್ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಸದ್ಯ ಈ ಪ್ರಕರಣ ಸೈಬರ್ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದೆ. ಇದನ್ನೂ ಓದಿ: ವಾಕಿಂಗ್ ವೇಳೆ ಕಾರು ಡಿಕ್ಕಿ – ಮ್ಯಾರಥಾನ್ ಓಟಗಾರ ಶತಾಯುಷಿ ಫೌಜಾ ಸಿಂಗ್ ಸಾವು