ಭಾರತ ಮರುನಾಮಕರಣ – ಚುನಾವಣೆಗಾಗಿ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ: ಸಿದ್ದರಾಮಯ್ಯ

By
1 Min Read

ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಂತಹ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ಮಧುಗಿರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ಸಂವಿಧಾನವನ್ನು 1949ರ ನವೆಂಬರ್ 26 ರಂದು ಅಂಗೀಕಾರ ಮಾಡಲಾಗಿದೆ. ಅಂದಿನಿಂದ ಭಾರತವನ್ನು ಇಂಡಿಯಾ (India) ಎಂದೇ ಕರೆಯಲಾಗಿದೆ. ಈಗ ಬದಲಾವಣೆ ಮಾಡುವ ಅಗತ್ಯವೇನು ಎಂದು ಪ್ರಶ್ನಿಸಿದರು.

ಸಂವಿಧಾನದ ಪೀಠಿಕೆಯಲ್ಲಿಯೂ ಭಾರತದ ಪ್ರಜೆಗಳಾದ ನಾವು ಎಂದೇ ಹೇಳಿದ್ದೇವೆ. ಈಗ ಭಾರತ (Bharat) ಎಂದು ಮರುನಾಮಕರಣ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯ ಪಟ್ಟರು. ಇದನ್ನೂ ಓದಿ: ದೇಶದ ಹೆಸರು ಬದಲಾವಣೆಗಿಂತ ಜನರ ಬದುಕು ಬದಲಾವಣೆ ಮುಖ್ಯ: ಡಿಕೆಶಿ

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಹಿಂದೂ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಧರ್ಮದಲ್ಲಿ ತಾರತಮ್ಯ ಮಾಡುವುದಿಲ್ಲ. ಹಿಂದೂ, ಇಸ್ಲಾಂ, ಕ್ರೈಸ್ತ, ಸಿಖ್, ಭೌದ್ಧ, ಧರ್ಮದಲ್ಲಿ ದಯವೇ ಧರ್ಮದ ಮೂಲವಯ್ಯ ಎಂದಿದ್ದಾರೆ ಎಂದರು. ಇದನ್ನೂ ಓದಿ: ಶಾಸಕರ ಅನಗತ್ಯ ಪತ್ರ ವ್ಯವಹಾರಕ್ಕೆ ಸಿಎಂ ಬ್ರೇಕ್?

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್