‘ಭೀಮ’ನ ಟೀಸರ್ ರಿಲೀಸ್: ವಿಜಯ್ ದುನಿಯಾದ ಮತ್ತೊಂದು ಖದರ್

Public TV
1 Min Read

ದುನಿಯಾ ವಿಜಯ್ ಅವರ ಹುಟ್ಟು ಹಬ್ಬಕ್ಕೆ ಅವರೇ ನಿರ್ದೇಶನ ಮಾಡಿ, ನಟಿಸಿರುವ ಭೀಮ (Bheem) ಸಿನಿಮಾದ  ಟೀಸರ್ ರಿಲೀಸ್ ಆಗಿದೆ. ಮತ್ತೊಂದು ಮಾಸ್ ಸಿನಿಮಾದ ಮೂಲಕ ಎರಡನೇ ಬಾರಿಗೆ ನಿರ್ದೇಶಕರಾಗಿ ವಿಜಯ್ ಜನರ ಮುಂದೆ ನಿಂತಿದ್ದಾರೆ. ಮೇಲ್ನೋಟಕ್ಕೆ ಪೊಲೀಸ್ ವ್ಯವಸ್ಥೆ, ಡ್ರಗ್ಸ್ ಮಾಫಿಯಾ ಸುತ್ತ ಹೆಣೆದಿರುವ ಕಥೆ ಎನ್ನುವ ಸುಳಿವನ್ನು ಟೀಸರ್ ನೀಡುತ್ತದೆ.

ಈ ಹುಟ್ಟು ಹಬ್ಬದ ಸಂದರ್ಭದಲ್ಲಿ ದುನಿಯಾ ವಿಜಯ್ (Duniya Vijay) ಅವರು ತಮ್ಮ ಅಭಿಮಾನಿಗಳಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದರು. ಯಶ್ (Yash) ಫ್ಯಾನ್ಸ್ ದುರಂತ ಸಾವಿನ ಬಳಿಕ ವಿಜಯ್ ಅಭಿಮಾನಿಗಳಿಗೆ ಕೈ ಮುಗಿದು ಮನವಿ ಮಾಡಿಕೊಂಡಿದ್ದರು. ಬ್ಯಾನರ್ಸ್ ಕಟ್ಟದಂತೆ ಕೇಳಿಕೊಂಡಿದ್ದಾರೆ.

ಇನ್ನೂ ಕಳೆದ ಬಾರಿ ಅಭಿಮಾನಿಯೊಬ್ಬರು ನಡೆದುಕೊಂಡೇ ವಿಜಯ್ ಹುಟ್ಟುಹಬ್ಬಕ್ಕೆ ಬಂದಿದ್ದರು. ಹಾಗಾಗಿ ಕೈ ಮುಗಿದು ಕೇಳಿಕೊಳ್ಳುತ್ತೇನೆ ಯಾವ ಅಭಿಮಾನಿಗಳು ಸಹ ಈ ಬಾರಿ ನಡೆದುಕೊಂಡು ಬರಬೇಡಿ, ಯಾರು ಕೇಕ್ ಮತ್ತು ಹೂವಿನ ಹಾರ ತರಬೇಡಿ. ನನಗೆ ನಿಮ್ಮ ಜೊತೆಗೆ ಕುಳಿತು ಪ್ರೀತಿಯಿಂದ ಊಟ ಮಾಡುವ ಆಸೆಯಿದೆ ಎಂದು ಹೇಳಿದ್ದರು.

 

ಪ್ರತಿ ಬಾರಿಯಂತೆ ಈ ಬಾರಿಯೂ ವಿಜಯ್ ತಮ್ಮ ಅಭಿಮಾನಿಗಳನ್ನು ಭೇಟಿಯಾಗಿದ್ದಾರೆ. ತನ್ನ ಹುಟ್ಟೂರಾದ ಕುಂಬಾರನಹಳ್ಳಿಯಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳ ಜೊತೆಯಲ್ಲಿ ಕೂತು ಊಟ ಮಾಡಿದ್ದಾರೆ.

Share This Article