ಭೀಮಾ ಕೋರೆಗಾಂವ್‌ ಪ್ರಕರಣ – ದಲಿತ ಚಿಂತಕ ಆನಂದ್‌ ತೇಲ್ತುಂಬ್ಡೆಗೆ ಬಾಂಬೆ ಹೈಕೋರ್ಟ್ ಜಾಮೀನು

Public TV
1 Min Read

ಮುಂಬೈ: ಭೀಮಾ ಕೋರೆಗಾಂವ್ ಪ್ರಕರಣದಲ್ಲಿ (Bhima Koregaon Case) ಡಾ. ಬಿ.ಆರ್.ಅಂಬೇಡ್ಕರ್‌ ಅವರ ಮೊಮ್ಮಗಳ ಪತಿ ಹಾಗೂ ದಲಿತ ಚಿಂತಕ ಆನಂದ್ ತೇಲ್ತುಂಬ್ಡೆಗೆ (Anand Teltumbde) ಬಾಂಬೆ ಹೈಕೋರ್ಟ್ (Bombay High Court) ಶುಕ್ರವಾರ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರೂ. ಶ್ಯೂರಿಟಿ ಮೇಲೆ ತೇಲ್ತುಂಬ್ಡೆ ಅವರಿಗೆ ಜಾಮೀನು ನೀಡಲಾಗಿದೆ.

ವಿಶೇಷ ಎನ್‌ಐಎ (NIA) ನ್ಯಾಯಾಲಯ ತನ್ನ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದರ ವಿರುದ್ಧ ಆನಂದ್‌ ತೇಲ್ತುಂಬೆ ಕಳೆದ ವರ್ಷ ಹೈಕೋರ್ಟ್‌ ಮೊರೆ ಹೋಗಿದ್ದರು. ಇದನ್ನೂ ಓದಿ: ಮತ ಹಾಕದಿದ್ದರೆ 2024ರ ಚುನಾವಣೆಯೇ ನನ್ನ ಕೊನೆಯ ಎಲೆಕ್ಷನ್: ಚಂದ್ರಬಾಬು ನಾಯ್ಡು

ಭೀಮಾ ಕೋರೆಗಾಂವ್‌ ಪ್ರಕರಣವು 2017ರ ಡಿಸೆಂಬರ್ 31ರಂದು ಪುಣೆಯ ಶನಿವಾರವಾಡದಲ್ಲಿ ನಡೆದ ಎಲ್ಗಾರ್ ಪರಿಷದ್ ಸಮಾವೇಶದಲ್ಲಿ ಮಾಡಿದ ಪ್ರಚೋದನಕಾರಿ ಭಾಷಣಗಳಿಗೆ ಸಂಬಂಧಿಸಿದೆ. ಭಾಷಣದ ಮರುದಿನ ನಗರದ ಹೊರವಲಯದಲ್ಲಿರುವ ಭೀಮಾ ಕೋರೆಗಾಂವ್ ಯುದ್ಧ ಸ್ಮಾರಕದ ಬಳಿ ಹಿಂಸಾಚಾರವನ್ನು ಪ್ರಚೋದಿಸಿತು ಎಂದು ಪೊಲೀಸರು ತಿಳಿಸಿದ್ದರು.

ಈ ಹಿಂಸಾಚಾರದಲ್ಲಿ ಓರ್ವ ಮೃತಪಟ್ಟು, ಹಲವರು ಗಾಯಗೊಂಡಿದ್ದರು. 12ಕ್ಕೂ ಹೆಚ್ಚು ಕಾರ್ಯಕರ್ತರು, ಶಿಕ್ಷಣತಜ್ಞರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಈ ಪ್ರಕರಣವನ್ನು ಸದ್ಯ ಎನ್‌ಐಎ ತನಿಖೆ ನಡೆಸುತ್ತಿದೆ.‌ ಇದನ್ನೂ ಓದಿ: ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯುವವರೆಗೂ ಭಾರತ ವಿಶ್ರಮಿಸಲ್ಲ – ಮೋದಿ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *