ಛತ್ತೀಸ್‍ಗಢ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಕೆಲಸ

Public TV
1 Min Read

ರಾಯ್ಪರ: ಛತ್ತೀಸ್‍ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಗಣರಾಜ್ಯೋತ್ಸವ ಅಂಗವಾಗಿ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆಯನ್ನು ಕೊಟ್ಟಿದ್ದಾರೆ. ಸರ್ಕಾರಿ ಕಚೇರಿಗಳು ವಾರದಲ್ಲಿ 5 ದಿನ ಮಾತ್ರ ಕಾರ್ಯನಿರ್ವಹಿಸಲಿವೆ ಎಂದು ಹೇಳಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ಸರ್ಕಾರಿ ನೌಕರರ ದಕ್ಷತೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಪ್ರಯತ್ನದ ಭಾಗವಾಗಿ, ಛತ್ತೀಸ್‍ಗಢ ಸರ್ಕಾರವು ವಾರದಲ್ಲಿ ಐದು ದಿನ ಕೆಲಸ ನಿಯಮವನ್ನು ಜಾರಿಗೊಳಿಸುತ್ತಿದೆ. ಪಿಂಚಣಿ ಯೋಜನೆಯಲ್ಲಿ ರಾಜ್ಯ ಸರ್ಕಾರದ ಕೊಡುಗೆಯನ್ನು ಸಹ ಶೇಕಡಾ 10 ರಿಂದ ಶೇಕಡಾ 14 ಕ್ಕೆ ಹೆಚ್ಚಿಸಲಾಗುವುದು ಎಂದು ಬಘೇಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಸೋದರಮಾವನ ಜೊತೆ ಸೇರಿ ಪತಿಯನ್ನೇ ಕೊಂದಳು!

ಮಹಿಳೆಯರ ಸುರಕ್ಷತೆಯನ್ನು ಬಲಪಡಿಸಲು ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಸುರಕ್ಷತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ವಸತಿ ಪ್ರದೇಶಗಳಲ್ಲಿ ಕೈಗೊಳ್ಳಲಾಗುತ್ತಿರುವ ಸಣ್ಣ ವಾಣಿಜ್ಯ ಚಟುವಟಿಕೆಗಳಿಗೆ ನ್ಯಾಯ ಒದಗಿಸುವ ಮಸೂದೆಯನ್ನು ರಾಜ್ಯ ಸರ್ಕಾರವು ಪರಿಚಯಿಸುತ್ತಿದೆ. ಇದು ಸಾವಿರಾರು ಸಣ್ಣ ಉದ್ಯಮಿಗಳಿಗೆ ಪ್ರಯೋಜನವಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಿಂಚಣಿ ಪಡೆಯಲು ಚಿಕ್ಕಪ್ಪನ ಶವವನ್ನ ಪೋಸ್ಟ್ ಆಫೀಸ್‍ಗೇ ತಂದ!

ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಸಾರ್ವಜನಿಕರಿಗೆ ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಾಗುವಂತೆ ರಾಜ್ಯಾದ್ಯಂತ ಹೆಚ್ಚಿನ ಸಂಖ್ಯೆಯ ಸಾರಿಗೆ ಸೌಲಭ್ಯ ಕೇಂದ್ರಗಳನ್ನು ತೆರೆಯಲಾಗುವುದು. ಇದಕ್ಕೆ ಪೂರಕವಾಗಿ ಕಲಿಕಾ ಚಾಲನಾ ಪರವಾನಗಿ ನೀಡುವ ನಿಯಮಗಳನ್ನು ಸರಳೀಕರಿಸಲಾಗುವುದು. ಛತ್ತೀಸ್‍ಗಢವು ದಟ್ಟವಾದ ಅರಣ್ಯ ಪ್ರದೇಶವಾಗಿದ್ದು, ಬಹುಪಾಲು ಬುಡಕಟ್ಟು ಜನಸಂಖ್ಯೆಯ ಜೀವನೋಪಾಯವು ಅರಣ್ಯಗಳ ಮೇಲೆ ಅವಲಂಬಿತವಾಗಿದೆ. ಈ ಅರಣ್ಯವಾಸಿಗಳಿಗೆ ಕೆಲವು ಯೋಜನೆಗಳನ್ನು ಮುಂದಿನ ದಿನಗಳಲ್ಲಿ ತರುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಂದಿಗೂ ಮನೆಗೆ ಬಾರದ ಮಾಲಕಿಗಾಗಿ ಕಾಯುತ್ತಿರುವ ನಾಯಿ – ವೀಡಿಯೋ ವೈರಲ್!

Share This Article
Leave a Comment

Leave a Reply

Your email address will not be published. Required fields are marked *