ಶಿವರಾಜಕುಮಾರ್ ಹುಟ್ಟುಹಬ್ಬಕ್ಕೆ ’BIG DADDY’ ವಿಡಿಯೋ

Public TV
1 Min Read

ರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರು ಜುಲೈ 12ಕ್ಕೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಶಿವಣ್ಣ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ಘೋಸ್ಟ್’ ಚಿತ್ರದ BIG DADDY ವಿಡಿಯೋ  ಬಿಡುಗಡೆಯಾಗಲಿದೆ.  BIG DADDY ವಿಡಿಯೋವನ್ನು (Video) ಅದ್ದೂರಿಯಾಗಿ ಬಿಡುಗಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ.

ಘೋಸ್ಟ್  (Ghost) ಸಿನಿಮಾ ಕನ್ನಡ ಸೇರಿದಂತೆ ಮೂರು ಭಾಷೆಗಳಲ್ಲಿ ನಿರ್ಮಾಣವಾಗಿದ್ದು, ಈಗಾಗಲೇ ಚಿತ್ರ ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಬಿಗ್ ಡ್ಯಾಡಿ ಕುರಿತಾಗಿ ಚಿತ್ರತಂಡ ಪೋಸ್ಟರ್ ಸಹ ಬಿಡುಗಡೆ ಮಾಡಿದ್ದು, ಈ ವಿಡಿಯೋ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.  ಇದನ್ನೂ ಓದಿ:ಕಾರವಾರದಲ್ಲಿ ಬದುಕಿದ್ದ ವಿಲಕ್ಷಣ ವ್ಯಕ್ತಿಯ ಕಥೆಯೇ ‘ಟೋಬಿ’ : ಗುಟ್ಟು ರಟ್ಟು

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ,  ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ (Srini) ನಿರ್ದೇಶನದ ಘೋಸ್ಟ್ ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯವಾಗಿದೆ.

ಶಿವರಾಜಕುಮಾರ್ (Shivaraj Kumar), ಅನುಪಮ್ ಖೇರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್