ಗುರುವಾರ ಬಿಎಸ್‌ವೈ, ರಾಮುಲುಗೆ ಬಿಗ್‌ ಡೇ!

Public TV
1 Min Read

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ (Yediyurappa), ಮಾಜಿ ಆರೋಗ್ಯ ಮಂತ್ರಿ ಶ್ರೀರಾಮುಲು (Sriramulu ಪಾಲಿಗೆ ನಾಳೆ ಬಿಗ್ ಡೇ. ಕಾರಣ ಕೋವಿಡ್ ಅಕ್ರಮ ಪ್ರಕರಣದಲ್ಲಿ (Covid Scam) ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ವರದಿ ಆಧರಿಸಿ ಸಿದ್ದರಾಮಯ್ಯ (Siddaramaiah) ಸರ್ಕಾರ ವಿಶೇಷ ತನಿಖಾ ತಂಡದ (SIT) ತನಿಖೆಗೆ ಆದೇಶ ನೀಡುವ ಸಂಭವ ಇದೆ.

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಗೃಹ ಸಚಿವ ಪರಮೇಶ್ವರ್‌ ಅವರು ಕ್ಯಾಬಿನೆಟ್‌ನಲ್ಲಿ ಈ ಬಗ್ಗೆ ಚರ್ಚೆ ನಡೆಯುವುದಿಲ್ಲ ಎಂದು ಹೇಳಿದ್ದಾರೆ.  ಇದನ್ನೂ ಓದಿ: ನಾಲಗೆ ಕಚ್ಚಿ, ಜೋರು ಗದರಿ ಕೈ ಎತ್ತಿದ ಸಿದ್ದರಾಮಯ್ಯ

 

ಕೋವಿಡ್ ಔಷಧಿ ಖರೀದಿ ಮತ್ತು ನಿರ್ವಹಣೆಯಲ್ಲಿ 340 ಕೋಟಿ ರೂ.ನಷ್ಟು ಅವ್ಯವಹಾರ ನಡೆದಿದೆ. ಇದನ್ನು ವಸೂಲಿ ಮಾಡಿ ಈ ಖರೀದಿ ಒಪ್ಪಂದ ಮಾಡಿಕೊಂಡವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಸರ್ಕಾರ ಕುನ್ಹಾ ಆಯೋಗ (Michael D Kunha Commission) ಶಿಫಾರಸು ಮಾಡಿದೆ.

ಕೋವಿಡ್ ಅಕ್ರಮದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಏನಂತಾರೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರೆ ತನಿಖೆ ನಡೆಯಲಿ. ಉಪ್ಪು ತಿಂದವರು ನೀರು ಕುಡಿಯಲಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೆಹಲಿಯಲ್ಲಿ ಟಕ್ಕರ್ ನೀಡಿದ್ದಾರೆ.

 

Share This Article