ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್‌ಸಿ ರವಿಕುಮಾರ್ (BJP MLC Ravikumar) ಅವರಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ಜೂನ್ 8ರ ವರೆಗೆ ಬಂಧಿಸಂದಂತೆ ಆದೇಶ ನೀಡಿರುವ ಕೋರ್ಟ್ ತನಿಖೆಗೆ ಸಹಕರಿಸುವಂತೆ ರವಿಕುಮಾರ್‌ಗೆ ಅವರಿಗೆ ಸೂಚನೆ ನೀಡಿದೆ. ಇದನ್ನೂ ಓದಿ: ಶಾಲಿನಿ ರಜನೀಶ್ ವಿರುದ್ಧ ರವಿಕುಮಾರ್ ಮಾತಾಡಿದ್ದು ಸರಿ ಅಲ್ಲ: ಬಿಜೆಪಿ ಶಾಸಕ ಸುರೇಶ್ ಗೌಡ
ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರೈಂ ನಂ.66/2025 ಸಂಖ್ಯೆಯ ಎಫ್‌ಐಆರ್ ರದ್ದು ಮಾಡುವಂತೆ ರವಿಕುಮಾರ್ ಸಲ್ಲಿಸಿದ್ದ ಅರ್ಜಿ ನ್ಯಾ.ಎಸ್.ಆರ್ ಕೃಷ್ಣಕುಮಾರ್ ಪೀಠದಲ್ಲಿ ವಿಚಾರಣೆ ನಡೆಯಿತು. ರವಿಕುಮಾರ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, ಎಂಎಲ್‌ಸಿ ರವಿಕುಮಾರ್ ಅವರು ವಿಧಾನಸೌಧ ಬಳಿ ಪ್ರತಿಭಟನೆ ವೇಳೆ ಮಾತನಾಡಿದ್ದಾರೆ ಎನ್ನಲಾಗಿದೆ. ಟಿವಿಯಲ್ಲಿ ಮಾತನಾಡಿದ್ದಾರೆ ಎಂದು ದೂರುದಾರರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಮುಖ್ಯ ಕಾರ್ಯದರ್ಶಿ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ ಎಂದು ರವಿಕುಮಾರ್ ಮೆಚ್ಚುಗೆ ಸೂಚಿಸಿದ್ದಾರೆ. ಇದು ರಾಜಕೀಯ ದುರುದ್ದೇಶದ ಪ್ರಕರಣವಾಗಿದ್ದು, ಪೀಠಕ್ಕೆ ರವಿಕುಮಾರ್ ಏನು ಮಾತನಾಡಿದ್ದಾರೆ ಎಂಬುದರ ವಿಡಿಯೊವನ್ನು ಟ್ಯಾಬ್ ಮೂಲಕ ತೋರಿಸಿದ್ರು. ಇದನ್ನೂ ಓದಿ: ದೆಹಲಿ ಸರ್ಕಾರದಿಂದ ಯೂಟರ್ನ್ – ಅವಧಿ ಮೀರಿದ ವಾಹನಗಳಿಗೆ ಹೇರಿದ್ದ ಇಂಧನ ನಿಷೇಧ ಆದೇಶ ವಾಪಸ್
ಎಸ್‌ಪಿಪಿ ಬೆಳ್ಳಿಯಪ್ಪ ಪ್ರತಿವಾದ ಮಂಡಿಸಿ ರವಿಕುಮರ್ 2ನೇ ಬಾರಿ ಹೀಗೆ ಮಾತನಾಡ್ತಿದ್ದಾರೆ. ಈ ಹಿಂದೆ ಮಹಿಳಾ ಜಿಲ್ಲಾಧಿಕಾರಿಯೊಬ್ಬರನ್ನ ಪಾಕಿಸ್ತಾನದ ಸಹೋದರಿ ಅಂದಿದ್ರು. ನಾವು ಇಲ್ಲಿ ಡಿಸೈಡ್ ಮಾಡೋದಕ್ಕೆ ಬರೋದಿಲ್ಲ, ತನಿಖೆ ಆಗಲಿ, ಎಫ್‌ಐಆರ್ ಆಗಿ 24 ಗಂಟೆ ಕಳೆದಿಲ್ಲ ಆಗಲೇ ಕೋರ್ಟ್‌ಗೆ ಬಂದಿದ್ದಾರೆ. ವಿಕ್ಟಿಮ್ ಮುಖ್ಯ ಕಾರ್ಯದರ್ಶಿ ಅವರ ಹೇಳಿಕೆ ದಾಖಲಿಸಬೇಕಿದೆ. ಮಾಧ್ಯಮಗಳ ಹೇಳಿಕೆಯನ್ನೂ ದಾಖಲಾಸಲಾಗುತ್ತೆ, ಇದೊಂದು ಏಳು ವರ್ಷಗಳವರೆಗಿನ ಸಜೆಯುಳ್ಳ ಕೇಸ್ ಆಗಿದ್ದು, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿ ಇಲ್ಲಿ ರಕ್ಷಣೆ ಕೋರೋದು ಸರಿಯಿಲ್ಲ. ಐಎಎಸ್ ಅಧಿಕಾರಿಗಳು ಇವ್ರ ವಿರುದ್ಧ ಪ್ರತಿಭಟಿಸ್ತಿದ್ದಾರೆ ಅಂತ ವಾದ ಮಂಡಿಸಿದ್ರು.
ರಾಜಕಾರಣಿಗಳು ಬಳಸುವ ಭಾಷೆ ಕೆಳಮಟ್ಟಕ್ಕಿಳಿದಿದೆ ಅಂತ ಅಭಿಪ್ರಾಯ ಪಟ್ಟ ನ್ಯಾಯಾಧೀಶರು, ಜುಲೈ 8ರ ವರೆಗೆ ಬಂಧಿಸದಂತೆ, ತನಿಖೆಗೆ ಸಹಕಾರ ನೀಡುವಂತೆ ಆದೇಶ ನೀಡಿದ್ರು. ಇನ್ನು ಸಂಜೆ ವೇಳೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ್ ಭಟ್, ಎಂಎಲ್‌ಸಿ ರವಿಕುಮಾರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ. ಬಂಧನ ಭೀತಿಯಲ್ಲಿದ್ದ ರವಿಕುಮಾರ್‌ಗೆ ಎರಡೂ ಕೋರ್ಟ್ ಗಳ ಆದೇಶ ನಿರಾಳತೆ ತಂದಿದೆ. ಇದನ್ನೂ ಓದಿ: Custodial Death Case | ದೇಹದ ಮೇಲೆ 44 ಗಾಯದ ಗುರುತು, ಮೆದುಳಿನಲ್ಲಿ ರಕ್ತಸ್ರಾವ – ಮರಣೋತ್ತರ ಪರೀಕ್ಷಾ ವರದಿ ಔಟ್