ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ

Public TV
1 Min Read

ಬೆಂಗಳೂರು: ಕರ್ನಾಟಕದಲ್ಲಿ ಕಮಲ್‌ ಹಾಸನ್‌ (Kamal Haasan) ಅಭಿನಯದ ಥಗ್‌ ಲೈಫ್‌ (Thug Life) ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆಯಾಗಿದೆ.

ಕರ್ನಾಟಕದಲ್ಲಿ ‘ಥಗ್‌ಲೈಫ್’ ಚಿತ್ರ ರಿಲೀಸ್ ಮಾಡುವ ಕುರಿತು ನಟ ಕಮಲ್ ಹಾಸನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ (High Court) ಜೂನ್ 10ಕ್ಕೆ ಮುಂದೂಡಿದೆ.

ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ ಈ ಕುರಿತು ವಿಚಾರಣೆ ನಡೆಸಿ ಜೂನ್ 10ರ ಒಳಗೆ ಕಮಲ್ ಹಾಸನ್ ಫಿಲಂ ಚೇಂಬರ್ ಜೊತೆಯಲ್ಲಿ ಮಾತುಕತೆ ಮಾಡಿಕೊಂಡು ವಿವಾದ ಇತ್ಯರ್ಥ ಮಾಡಿಕೊಳ್ಳುವಂತೆ ಸೂಚಿಸಿದೆ. ಅಲ್ಲಿಯವರೆಗೂ ಕರ್ನಾಟಕದಲ್ಲಿ ಥಗ್‌ಲೈಫ್ ರಿಲೀಸ್ ಮಾಡದಂತೆ ಸೂಚಿಸಿದೆ.

ವಿಚಾರಣೆ ವೇಳೆ ಹೈಕೋರ್ಟ್​ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಕ್ಷಮೆ ಕೇಳಿದ್ರೆ ಮಾತ್ರ ಅರ್ಜಿ ಪರಿಗಣಿಸುತ್ತೇವೆ. ಯಾವುದೋ ಭಾಷೆಯಿಂದ ಇನ್ನೊಂದು ಭಾಷೆ ಹುಟ್ಟಿದೆ ಅಂದ್ರೆ ಹೇಗೆ? ಕನ್ನಡ ಭಾಷೆ ತಮಿಳಿಂದ ಹುಟ್ಟಿದೆ ಅನ್ನೋಕೆ ಅವರೇನು ಇತಿಹಾಸಕಾರರಾ? ಈ ಹಿಂದೆ ಸಿ.ರಾಜಗೋಪಾಲಾಚಾರಿ ಕೂಡ ಕ್ಷಮೆಯನ್ನು ಕೇಳಿದ್ದರು. ಇವತ್ತಿನ ಪರಿಸ್ಥಿತಿ ನಿರ್ಮಾಣಕ್ಕೆ ನೀವೇ ಕಾರಣ, ಈ ರೀತಿ ಹೇಳಿಕೆ ನೀಡಬಾರದು. ಕಮಲ್ ಹಾಸನ್ ಸಾಮಾನ್ಯ ವ್ಯಕ್ತಿ ಅಲ್ಲ, ಪಬ್ಲಿಕ್ ಫಿಗರ್​. ಅವರು ಮೊದಲು ಕ್ಷಮೆ ಕೇಳಲಿ, ಆಮೇಲೆ ಅರ್ಜಿ ಪರಿಗಣಿಸ್ತೇವೆ ಎಂದು ಹೇಳಿದರು. ಇದಕ್ಕೆ ಕಮಲ್ ಹಾಸನ್ ಪರ ವಕೀಲರು ಪ್ರತಿಕ್ರಿಯೆ ನೀಡಲು ಮಧ್ಯಾಹ್ನ 2.30ರವರೆಗೆ ಸಮಯಾವಕಾಶ ಕೋರಿದ್ದರು.

Share This Article