‘ಬಿಗ್ ಬಾಸ್’ ಖ್ಯಾತಿಯ ಅಬ್ದು ರೋಜಿಕ್ ಮದುವೆ ಡೇಟ್ ಫಿಕ್ಸ್- ಹುಡುಗಿ ಯಾರು?

Public TV
1 Min Read

‘ಬಿಗ್ ಬಾಸ್ ಹಿಂದಿ ಸೀಸನ್ 16’ರ (Bigg Boss Hindi 16) ಖ್ಯಾತಿಯ ಅಬ್ದು ರೋಜಿಕ್ (Abdu Roziq) ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ತಜಿಕಿಸ್ತಾನ್ ದೇಶದ ಗಾಯಕನಾಗಿರುವ 20 ವರ್ಷದ ಅಬ್ದು ಮದುವೆಯಾಗಿರುತ್ತಿರುವ ಸಿಹಿಸುದ್ದಿ ನೀಡಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಕನ್ನಡ ಕಿರುತೆರೆಯಲ್ಲಿ ಹೊಸ ರಿಯಾಲಿಟಿ ಶೋ

ನನ್ನನ್ನು ಗೌರವಿಸುವ, ಪ್ರೀತಿಸುವ ಹುಡುಗಿ ಸಿಗುತ್ತಾಳೆ ಎಂದು ನಾನು ಊಹಿಸಿರಲಿಲ್ಲ. ನಾನು ಎಷ್ಟು ಸಂತೋಷವಾಗಿದ್ದೇನೆ ಎಂಬುದನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ ಎಂದಿದ್ದಾರೆ ಅಬ್ದು. ಡೈಮಂಡ್ ರಿಂಗ್ ಹಿಡಿದುಕೊಂಡಿರುವ ಫೋಟೋವನ್ನು ಶೇರ್ ಮಾಡಿ ಇದಕ್ಕೆ ಅವರು ಅಡಿಬರಹ ಕೂಡ ನೀಡಿದ್ದಾರೆ.

 

View this post on Instagram

 

A post shared by Abduroziq Official (@abdu_rozik)


ನಿಮಗೆಲ್ಲ ಗೊತ್ತಿರುವಂತೆ ನನಗೆ 20 ವರ್ಷ. ಪ್ರೀತಿಯಲ್ಲಿ ಬೀಳಬೇಕು, ನಾನು ಪ್ರೀತಿಸೋ ಹುಡುಗಿ ನನ್ನನ್ನು ಗೌರವಿಸಬೇಕು, ಅತಿಯಾಗಿ ಪ್ರೀತಿ ಮಾಡಬೇಕು ಎನ್ನುವ ಆಸೆ ಇತ್ತು. ಆಗ ಈ ಹುಡುಗಿ ಸಿಕ್ಕಳು. ಹೇಗೆ ಹೇಳಬೇಕು ಎನ್ನುವುದೇ ತಿಳಿಯುತ್ತಿಲ್ಲ. ನಾನು ಸಖತ್ ಎಗ್ಸೈಟ್ ಆಗಿದ್ದೇನೆ. ನಿಮ್ಮೆಲ್ಲರಿಗೂ ಒಂದು ಸರ್ಪ್ರೈಸ್ ಎಂದಿರುವ ಅವರು ರಿಂಗ್ ಓಪನ್ ಮಾಡಿ ತೋರಿಸಿದ್ದಾರೆ.

ಜೂನ್ 7 ಈ ದಿನಾಂಕ ಸೇವ್ ಮಾಡಿಕೊಳ್ಳಿ ಎಂದಿರುವ ಅಬ್ದು, ನನ್ನ ಈ ಖುಷಿಯನ್ನು ಶಬ್ಧಗಳಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಅಭಿಮಾನಿಗಳಲ್ಲಿ ಹೇಳಿಕೊಂಡಿದ್ದಾರೆ. ಅಂದಹಾಗೆ, ಶಾರ್ಜಾದ ಅಮಿರಾ ಎಂಬ 19 ವರ್ಷದ ಹುಡುಗಿಯನ್ನು ಅಬ್ದು ರೋಜಿಕ್ ಮದುವೆಯಾಗುತ್ತಿದ್ದಾರೆ ಎಂದು ವರದಿಯಾಗಿದೆ.

Share This Article