ಉದ್ಯಮಿ ಪ್ರತ್ಯಕ್ಷ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚಂದನಾ ಅನಂತಕೃಷ್ಣ

Public TV
1 Min Read

‘ಲಕ್ಷ್ಮಿ ನಿವಾಸ’ (Lakshmi Nivasa) ನಟಿ ಚಂದನಾ ಅನಂತಕೃಷ್ಣ (Chandana Ananthakrishna) ಅವರು ಇಂದು (ನ.28) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಟಿಯ ಮದುವೆ (Wedding) ಜರುಗಿದೆ. ಈ ಸಂಭ್ರಮದಲ್ಲಿ ಕಿರುತೆರೆಯ ಕಲಾವಿದರು ಭಾಗಿಯಾಗಿ ಹೊಸ ಜೋಡಿಗೆ ಶುಭಹಾರೈಸಿದ್ದಾರೆ.

ಗುರುಹಿರಿಯರು ನಿಶ್ಚಿಯಿಸಿದ ಮದುವೆ ಇದಾಗಿದ್ದು, ಇತ್ತೀಚೆಗೆ ಕುಟುಂಬಸ್ಥರು ಸಮ್ಮುಖದಲ್ಲಿ ನಟಿಯ ನಿಶ್ಚಿತಾರ್ಥ ಸರಳವಾಗಿ ನಡೆದಿತ್ತು. ಇಂದು ಅದ್ಧೂರಿಯಾಗಿ ಚಂದನಾ ಮತ್ತು ಪ್ರತ್ಯಕ್ಷ್ ಮದುವೆ ನಡೆದಿದೆ. ಇದನ್ನೂ ಓದಿ:ನಿಮ್ಮ ಪ್ರೀತಿಯನ್ನು ಹೃದಯದಲ್ಲಿ ಬಚ್ಚಿಟ್ಟುಕೊಳ್ಳುತ್ತೀನಿ- ರಶ್ಮಿಕಾರನ್ನು ಹೊಗಳಿದ ಅಲ್ಲು ಅರ್ಜುನ್

ಪ್ರತ್ಯಕ್ಷ್ ಅವರು ಉದ್ಯಮಿಯಾಗಿದ್ದಾರೆ. ವಿಶೇಷ ಅಂದರೆ, ಪ್ರತ್ಯಕ್ಷ್ ಪೋಷಕರು ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ದಿವಂಗತ ಉದಯ್ ಹುತ್ತಿನಗದ್ದೆ ಅವರು ಡಾ.ರಾಜ್‌ಕುಮಾರ್ ಜೊತೆ ದೇವತಾ ಮನುಷ್ಯ ಚಿತ್ರದಲ್ಲಿ ನಟಿಸಿದ್ದರು. ಆರಂಭ, ಅಗ್ನಿಪರ್ವ, ಶುಭ ಮಿಲನ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದರು. ಅವರ ಪತ್ನಿ ಲಲಿತಾಂಜಲಿ ಉದಯ್ ಕೂಡ ಹಿರಿತೆರೆ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ.

ಇನ್ನೂ ರಾಜ ರಾಣಿ, ಹೂ ಮಳೆ, ಬಿಗ್ ಬಾಸ್ ಕನ್ನಡ ಸೀಸನ್ 7 ಶೋ ಸೇರಿದಂತೆ ಹಲವು ಪ್ರಾಜೆಕ್ಟ್ಗಳಲ್ಲಿ ಚಂದನಾ ಕಾಣಿಸಿಕೊಂಡಿದ್ದಾರೆ. ಪ್ರಸ್ತುತ ‘ಲಕ್ಷ್ಮಿ ನಿವಾಸ’ ಸೀರಿಯಲ್‌ನಲ್ಲಿ ಜಾಹ್ನವಿ ಪಾತ್ರದ ಮೂಲಕ ಅಭಿಮಾನಿಗಳ ಮನಗೆದ್ದಿದ್ದಾರೆ. ಜೊತೆಗೆ ‘ಭಾವ ತೀರ ಯಾನ’ ಸಿನಿಮಾದಲ್ಲಿ ಧೃತಿ ಪಾತ್ರಕ್ಕೆ ನಟಿ ಜೀವ ತುಂಬಿದ್ದಾರೆ.

Share This Article