ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ಹಿನಾ ಖಾನ್ ರ‍್ಯಾಂಪ್ ವಾಕ್- ಮದುಮಗಳಂತೆ ಮಿಂಚಿದ ನಟಿ

Public TV
1 Min Read

‘ಬಿಗ್ ಬಾಸ್’ ಖ್ಯಾತಿಯ ಹಿನಾ ಖಾನ್ (Hina Khan) 3ನೇ ಹಂತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಕಿಮೋಥೆರಪಿ ಚಿಕಿತ್ಸೆ ಪಡೆಯುತ್ತಿರುವ ಹಿನಾ ಇದೀಗ ಕಾರ್ಯಕ್ರಮವೊಂದರಲ್ಲಿ ರ‍್ಯಾಂಪ್ ವಾಕ್ ಮಾಡಿದ್ದಾರೆ. ಈ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ:‘ಮಾಂತ್ರಿಕ’ನ ಸಸ್ಪೆನ್ಸ್ ಜರ್ನಿ: ಆತ್ಮಗಳ ಬೆನ್ನತ್ತಿದ ಟೀಮ್

ಕೆಂಪು ಬಣ್ಣದ ಲೆಹೆಂಗಾ ಧರಿಸಿ ನಟಿ ಹಿನಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಮದುಮಗಳಂತೆ ನಗು ಮುಖದಿಂದ ವೇದಿಕೆಗೆ ಎಂಟ್ರಿ ಕೊಟ್ಟು ನಟಿ ರ‍್ಯಾಂಪ್ ವಾಕ್ ಮಾಡಿರೋದು ನೋಡಿ ಫ್ಯಾನ್ಸ್ ಭೇಷ್ ಎಂದಿದ್ದಾರೆ. ನಟಿಯ ವೃತ್ತಿಪರತೆಯನ್ನು ಅಭಿಮಾನಿಗಳು ಹೊಗಳಿದ್ದಾರೆ. ಇದನ್ನೂ ಓದಿ:‘ಮಾಂತ್ರಿಕ’ನ ಸಸ್ಪೆನ್ಸ್ ಜರ್ನಿ: ಆತ್ಮಗಳ ಬೆನ್ನತ್ತಿದ ಟೀಮ್

ಅಂದಹಾಗೆ, ಇತ್ತೀಚೆಗೆ ತಮಗಿರುವ ಸ್ತನ ಕ್ಯಾನ್ಸರ್ ಕಾಯಿಲೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದರು. ಈ ಕಾಯಿಲೆ ಇದ್ದಾಗಿಯೂ ನಾನು ಉತ್ತಮವಾಗಿದ್ದೇನೆ. ನಾನು ಬಲಶಾಲಿ ಮತ್ತು ಈ ರೋಗವನ್ನು ಜಯಿಸಲು ನಿಜವಾಗಿಯೂ ಬದ್ಧನಾಗಿದ್ದೇನೆ ಎಂದು ಎಲ್ಲರಿಗೂ ಭರವಸೆ ನೀಡಲು ನಾನು ಬಯಸುತ್ತೇನೆ. ನನ್ನ ಚಿಕಿತ್ಸೆಯು ಈಗಾಗಲೇ ಪ್ರಾರಂಭವಾಗಿದೆ. ಇದರಿಂದ ಇನ್ನಷ್ಟು ಬಲವಾಗಿ ಹೊರಹೊಮ್ಮಲು ಅಗತ್ಯವಿರುವ ಎಲ್ಲವನ್ನೂ ಮಾಡಲು ನಾನು ಸಿದ್ಧಳಿದ್ದೇನೆ ಎಂದು ಹಿನಾ ಖಾನ್ ಹೇಳಿಕೊಂಡಿದ್ದರು.

ಈ ಸಮಯದಲ್ಲಿ ನನ್ನ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ನಾನು ಭಾವಿಸುತ್ತೇನೆ. ನಿಮ್ಮ ಪ್ರೀತಿ, ಶಕ್ತಿ ಮತ್ತು ಆಶೀರ್ವಾದವನ್ನು ನಾನು ಆಳವಾಗಿ ಪ್ರಶಂಸಿಸುತ್ತೇನೆ. ನಾನು, ನನ್ನ ಕುಟುಂಬ ಮತ್ತು ಪ್ರೀತಿಪಾತ್ರರ ಜೊತೆಗೆ ಧನಾತ್ಮಕವಾಗಿ ಇರುತ್ತೇನೆ. ಸರ್ವಶಕ್ತನ ಅನುಗ್ರಹದಿಂದ, ನಾನು ಈ ಸವಾಲನ್ನು ಜಯಿಸುತ್ತೇನೆ ಮತ್ತು ಸಂಪೂರ್ಣವಾಗಿ ಆರೋಗ್ಯವಾಗಿರುತ್ತೇನೆ ಎಂದು ನಾನು ನಂಬಿದ್ದೇನೆ. ದಯವಿಟ್ಟು ನಿಮ್ಮ ಪ್ರಾರ್ಥನೆ, ಆಶೀರ್ವಾದ ಮತ್ತು ಪ್ರೀತಿ ನನ್ನ ಮೇಲೆ ಇರಲಿ ಎಂದು ನಟಿ ಮನವಿ ಮಾಡಿದ್ದರು.

Share This Article