ಹೆಣ್ಣು ಮಗುವಿಗೆ ತಂದೆಯಾದ ‘ಬಿಗ್ ಬಾಸ್’ ಖ್ಯಾತಿಯ ರಾಹುಲ್ ವೈದ್ಯ

Public TV
1 Min Read

ಹಿಂದಿ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ‘ಬಿಗ್ ಬಾಸ್’ (Bigg Boss) ಸೀಸನ್ 14 ಮೂಲಕ ಗಮನ ಸೆಳೆದ ರಾಹುಲ್ ವೈದ್ಯ (Rahul Vaidya) ಇದೀಗ ಹೆಣ್ಣು ಮಗುವಿನ ತಂದೆಯಾಗಿದ್ದಾರೆ. ರಾಹುಲ್ ಪತ್ನಿ ದಿವ್ಯಾ (Divya Parmar) ಸೆ.20ರಂದು ಹೆಣ್ಣು ಮಗುವಿಗೆ (Baby Girl) ಜನ್ಮ ನೀಡಿದ್ದಾರೆ.

ರಾಹುಲ್ ವೈದ್ಯ- ದಿವ್ಯಾ ದಂಪತಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಹೆಣ್ಣು ಮಗು ಆಗಮನವಾಗಿರುವ ಸಂತಸದಲ್ಲಿದ್ದಾರೆ. ಹೆಣ್ಣು ಮಗು ಆಗಮನವಾಗಿರುವ ಬಗ್ಗೆ ನಟ ಸೋಶಿಯಲ್ ಮೀಡಿಯಾದಲ್ಲಿ ಅಪ್‌ಡೇಟ್ ಹಂಚಿಕೊಂಡಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಬಳುಕುವ ಬಳ್ಳಿಯಂತೆ ಮಿಂಚಿದ ಶ್ರೀಲೀಲಾ

ಬಿಗ್ ಬಾಸ್ ಸೀಸನ್ 14ರಲ್ಲಿ ರಾಹುಲ್-ದಿವ್ಯಾ ಪರಮಾರ್‌ಗೆ ಪ್ರೇಮಾಂಕುರವಾಗಿದ್ದು, 2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ದಿವ್ಯಾ ಕೂಡ ನಟಿಯಾಗಿದ್ದು, ಸಾಕಷ್ಟು ಸೀರಿಯಲ್ ಮತ್ತು ಸಿನಿಮಾಗಳಲ್ಲಿ ನಟಿಸಿದ್ದಾರೆ.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್