ಕಲಾವಿದರ ಮೇಲೆ ಸೇಡು ತೀರಿಸಿದ ನಟ್ಟು ಬೋಲ್ಟ್‌ ಮಿನಿಸ್ಟರ್‌- ಜೆಡಿಎಸ್‌ ಕಿಡಿ

Public TV
1 Min Read

ಬೆಂಗಳೂರು: ಬಿಡದಿ (Bidadi) ಬಳಿ ನಡೆಯುತ್ತಿದ್ದ ಬಿಗ್‌ಬಾಸ್‌ ಶೋ (Bigg Boss) ನಡೆಯುತ್ತಿದ್ದ ಜಾಲಿವುಡ್‌ ಸ್ಟುಡಿಯೋಗೆ  ಬೀಗ ಹಾಕಿದ್ದಕೆ  ಜೆಡಿಎಸ್‌ (JDS) ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧ ಸಿಟ್ಟು ಹೊರಹಾಕಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆಯುತ್ತಿದ್ದ ಬಿಗ್ ಬಾಸ್ ರಿಯಾಲಿಟಿ ಷೋ ಬಂದ್ ಮಾಡಿಸಿ, ಕಲಾವಿದರ ಮೇಲೆ ಸೇಡು ತೀರಿಸಿಕೊಂಡ ನಟ್ಟು ಬೋಲ್ಟ್ ಮಿನಿಸ್ಟರ್ ಡಿಕೆ ಶಿವಕುಮಾರ್‌ (DK Shivakumar) ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದೆ.

ಮಾಲಿನ್ಯ ನಿಯಮ ಉಲ್ಲಂಘಿಸಿದ್ದಕ್ಕೆ ಬಿಗ್‌ ಬಾಸ್‌ ಶೋ ನಡೆಯುತ್ತಿದ್ದ ಜಾಲಿವುಡ್‌ ಸ್ಟುಡಿಯೋವನ್ನು ಬೆಂಗಳೂರು ದಕ್ಷಿಣ ಜಿಲ್ಲಾಡಳಿತ ಬಂದ್‌ ಮಾಡಿದೆ. ಪರಿಣಾಮ ಎಲ್ಲಾ ಸ್ಪರ್ಧಿಗಳು ಎರಡೇ ವಾರಕ್ಕೆ ಶೋದಿಂದ ಎಲಿಮಿನೇಟ್‌ ಆಗಿದ್ದಾರೆ.  ಇದನ್ನೂ ಓದಿ:  ಬಿಗ್‌ ಬಾಸ್‌ ಮನೆಗೆ ಬೀಗ – ರಕ್ಷಿತಾ ಹೇಳಿಕೆ ವೈರಲ್‌

ಏನಿದು ನಟ್ಟು ಬೋಲ್ಟ್‌ ವಿವಾದ?
16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಸಿನಿಮಾ ಕಲಾವಿದರು ಭಾಗವಹಿಸಿರಲಿಲ್ಲ.  ಈ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್‌, ಇದು ನನ್ನ ವಾರ್ನಿಂಗ್ ಅಂತಾದ್ರೂ ಅಂದ್ಕೊಳ್ಳಿ, ಕೋರಿಕೆ ಅಂತಾದ್ರೂ ಅಂದ್ಕೊಳ್ಳಿ, ಚಿತ್ರರಂಗದವರ ನಟ್ಟು ಬೋಲ್ಟ್ ಹೇಗೆ ಟೈಟ್ ಮಾಡಬೇಕು ಅಂತ ಗೊತ್ತು ಎಂದು ಹೇಳಿಕೆ ನೀಡಿದ್ದು ದೊಡ್ಡ ಚರ್ಚೆಗೆ ಗ್ರಾಸವಾಗಿತ್ತು. ಇದನ್ನೂ ಓದಿ:  ಬಿಗ್‌ಬಾಸ್‌ ಸ್ಪರ್ಧಿಗಳು ಈಗಲ್‌ಟನ್‌ ರೆಸಾರ್ಟ್‌ಗೆ ಶಿಫ್ಟ್‌

ಡಿಕೆಶಿ ಈ ಮೂಲಕ ಚಿತ್ರರಂಗದವರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ನೆಟ್ಟಿಗರು ಅಂದೇ ಟೀಕೆ ವ್ಯಕ್ತಪಡಿಸಿದ್ದರು. ಈಗ ಮಾಜಿ ಸ್ಪರ್ಧಿ ಪ್ರಶಾಂತ್‌ ಸಂಬರಗಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸುದೀಪ್‌ (Sudeep) ಬಿಜೆಪಿ ಪರ ಪ್ರಚಾರ ಮಾಡಿದ್ದಾರೆ ಎಂಬ ಕಾರಣಕ್ಕೆ ಡಿಕೆಶಿ ಬಿಗ್‌ಬಾಸ್‌ ಶೋ ರದ್ದು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Share This Article