Bihar | ಕಳ್ಳಭಟ್ಟಿ ಸೇವಿಸಿ 20 ಮಂದಿ ಸಾವು

Public TV
1 Min Read

ಪಾಟ್ನಾ: ಕಳ್ಳಭಟ್ಟಿ ಸೇವಿಸಿ 20 ಮಂದಿ ಸಾವಿಗೀಡಾಗಿರುವ ಘಟನೆ ಬಿಹಾರ (Bihar) ರಾಜ್ಯದ ಸಿವಾನ್ ಮತ್ತು ಸರನ್ ಜಿಲ್ಲೆಯಲ್ಲಿ ನಡೆದಿದೆ.

ಅಧಿಕಾರಿಗಳ ಮಾಹಿತಿ ಪ್ರಕಾರ ಕಳ್ಳಭಟ್ಟಿ (Liquior) ಸೇವನೆಯಿಂದ 6 ಜನ ಸಾವನ್ನಪ್ಪಿದ್ದರು. 12 ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಧಿಕಾರಿಗಳು ಮೃತರ ಹಾಗೂ ಚಿಕಿತ್ಸೆಗೆ ಒಳಪಟ್ಟವರ ಯಾವುದೇ ಗುರುತನ್ನು ಬಹಿರಂಗಪಡಿಸಿಲ್ಲ.ಇದನ್ನೂ ಓದಿ: ಮದುವೆಯಾದ 12 ವರ್ಷಗಳ ಬಳಿಕ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ರಾಧಿಕಾ ಆಪ್ಟೆ

ಸಿವಾನ್ ಜಿಲ್ಲೆಯ ಮ್ಯಾಜಿಸ್ಟ್ರೇಟ್ ಮುಕುಲ್ ಕುಮಾರ್ ಗುಪ್ತಾ ಮಾತನಾಡಿ, ಮಘಾರ್ ಮತ್ತು ಔರಿಯಾ ಪಂಚಾಯತ್ ವ್ಯಾಪ್ತಿಯಲ್ಲಿ ಮೂವರು ಸಾವನ್ನಪ್ಪಿದ್ದು, ಬೆಳಗ್ಗೆ 7:30 ಸುಮಾರಿಗೆ ಮಾಹಿತಿ ಲಭಿಸಿದೆ. ತಕ್ಷಣವೇ ಸ್ಥಳಕ್ಕೆ ಅಧಿಕಾರಗಳ ತಂಡವನ್ನು ಕಳುಹಿಸಲಾಗಿದ್ದು, 12 ಜನರನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಯಿತು. ಈ ವೇಳೆ ಮಾರ್ಗಮಧ್ಯೆ ಇನ್ನೋರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.

ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ವರದಿಯ ಬಳಿಕ ಸಾವಿಗೆ ನಿಖರ ಕಾರಣ ಏನು ಎಂಬುವುದನ್ನು ತಿಳಿಸಲಾಗುವುದು ಎಂದರು. ಸದ್ಯ ಎರಡು ಜಿಲ್ಲೆಯಲ್ಲಿ ಆಡಳಿತ ಮಂಡಳಿಯು ತನಿಖೆ ನಡೆಸುತ್ತಿದೆ. ಜೊತೆಗೆ ಮಘಾರ್ ಮತ್ತು ಔರಿಯಾ ಪಂಚಾಯಿತಿ ವ್ಯಾಪ್ತಿಯ ಇಬ್ಬರು ಚೌಕಿದಾರ್‌ರನ್ನು ಇಲಾಖೆಯು ಅಮಾನತುಗೊಳಿಸಿದೆ.

ಮತ್ತೊಂದು ಪ್ರಕರಣದಲ್ಲಿ, ಅ.16ರಂದು ಕಳ್ಳಭಟ್ಟಿ ಸೇವಿಸಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಿಹಾರ ರಾಜ್ಯದ ಇಬ್ರಾಹಿಂಪುರ ಪ್ರದೇಶದಲ್ಲಿ ನಡೆದಿದೆ.

ಸರನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮನ್ ಸಮೀರ್ ಮಾತನಾಡಿ, ಮೂವರು ಚಿಕಿತ್ಸೆ ಪಡೆಯುತ್ತಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿಯ ನಂತರ ಸಾವಿನ ನಿಖರವಾದ ಕಾರಣ ತಿಳಿಸಲಾಗುವುದು ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂಚ್ ಸೇವಿಸಿರುವ ಮಾಹಿತಿ ಲಭಿಸಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

2016ರ ಏಪ್ರಿಲ್‌ನಲ್ಲಿ ಬಿಹಾರ ಸರ್ಕಾರವು ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿದೆ. ನಿಷೇಧಿಸಿದ ನಂತರ ಅಕ್ರಮ ಮದ್ಯ ಸೇವನೆಯಿಂದ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಬಿಹಾರ ಸರ್ಕಾರ ತಿಳಿಸಿದೆ.ಇದನ್ನೂ ಓದಿ: ಮಲ್ಲೇಶ್ವರಂ ಸ್ಫೋಟದಲ್ಲಿ ಭಾಗಿಯಾಗಿದ್ದ ಉಗ್ರನಿಂದ ಸೆಂಟ್ರಲ್ ಜೈಲಿನಿಂದಲೇ ಹನಿಟ್ರ್ಯಾಪ್?

Share This Article