ಪಾಟ್ನಾ: ವಿದ್ಯುತ್ ಸೇರಿದಂತೆ ಈಗಾಗಲೇ ಹಲವು ಉಚಿತ ಭರವಸೆ ನೀಡಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ನೇತೃತ್ವದ ಸರ್ಕಾರ ಚುನಾವಣೆಗೆ ಮುನ್ನ ಮತ್ತೊಂದು ಬಂಪರ್ ಕೊಡುಗೆ ಘೋಷಣೆ ಮಾಡಿದೆ. ಬಿಸಿಯೂಟ ತಯಾರಕರು, ರಾತ್ರಿ ಕಾವಲುಗಾರರು (Night Watchmen) ಹಾಗೂ ಗೌರವ ಧನವನ್ನ ಹೆಚ್ಚಳ ಮಾಡಿದೆ.
नवम्बर 2005 में सरकार बनने के बाद से ही हमलोग शिक्षा व्यवस्था में सुधार के लिए लगातार काम कर रहे हैं। वर्ष 2005 में शिक्षा का कुल बजट 4366 करोड़ रूपए था जो अब बढ़कर 77690 करोड़ रूपए हो गया है। बड़ी संख्या में शिक्षकों की नियुक्ति, नए विद्यालय भवनों के निर्माण एवं आधारभूत संरचनाओं…
— Nitish Kumar (@NitishKumar) August 1, 2025
ಹೌದು. ಶಿಕ್ಷಣ ವ್ಯವಸ್ಥೆ ಬಲಪಡಿಸುವಲ್ಲಿ ಅಡುಗೆಯವರು (ಬಿಸಿಯೂಟ ತಯಾರಕರು), ರಾತ್ರಿ ಕಾವಲುಗಾರರು ಮತ್ತು ದೈಹಿಕ ಶಿಕ್ಷಣ ಮತ್ತು ಆರೋಗ್ಯ ಬೋಧಕರು ಪ್ರಮುಖ ಪಾತ್ರ ವಹಿಸಿದ್ದಾರೆ. ಇದನ್ನ ಗಮನದಲ್ಲಿಟ್ಟುಕೊಂಡು, ಈ ಕಾರ್ಮಿಕರ ಗೌರವಧನವನ್ನ ದ್ವಿಗುಣಗೊಳಿಸುವ ಮೂಲಕ ಗೌರವಾನ್ವಿತ ಹೆಚ್ಚಳ ಮಾಡಲು ನಾವು ನಿರ್ಧರಿಸಿದ್ದೇವೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ನಿತೀಶ್ ಪೋಸ್ಟ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 69 ದೇಶಗಳಿಗೆ ಸುಂಕದ ಬರೆ – ಭಾರತಕ್ಕೆ 25%, ಪಾಕಿಸ್ತಾನಕ್ಕೆ 19% ಸುಂಕ ವಿಧಿಸಿದ ಟ್ರಂಪ್
ನಿತೀಶ್ ಕುಮಾರ್ ಎಕ್ಸ್‌ನಲ್ಲಿ ಏನಿದೆ?
2005ರ ನವೆಂಬರ್‌ನಲ್ಲಿ ನಮ್ಮ ಸರ್ಕಾರ ರಚನೆಯಾದಾಗಿನಿಂದ, ನಾವು ಶಿಕ್ಷಣ ವ್ಯವಸ್ಥೆಯನ್ನ ಸುಧಾರಿಸಲು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ. 2005 ರಲ್ಲಿ ಶಿಕ್ಷಣದ ಒಟ್ಟು ಬಜೆಟ್ 4,366 ಕೋಟಿ ರೂ.ಗಳಾಗಿದ್ದು, ಈಗ ಅದು 77,690 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಹೆಚ್ಚಿನ ಸಂಖ್ಯೆಯ ಶಿಕ್ಷಕರ ನೇಮಕಾತಿ, ಹೊಸ ಶಾಲಾ ಕಟ್ಟಡಗಳ ನಿರ್ಮಾಣ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಯಿಂದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ವ್ಯಾಪಕ ಸುಧಾರಣೆ ಕಂಡುಬಂದಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್- ವಿಕಾಸ್ ಕುಮಾರ್ ಸಸ್ಪೆಂಡ್ ಆದೇಶ ವಾಪಸ್
ಶಿಕ್ಷಣ ವ್ಯವಸ್ಥೆ ಬಲಪಡಿಸುವಲ್ಲಿ ಅಡುಗೆಯವರು, ರಾತ್ರಿ ಕಾವಲುಗಾರರು ಮತ್ತು ದೈಹಿಕ ಶಿಕ್ಷಣ ಮತ್ತು ಆರೋಗ್ಯ ಬೋಧಕರು ಪ್ರಮುಖ ಪಾತ್ರ ವಹಿಸಿದ್ದಾರೆ. ಇದನ್ನ ಗಮನದಲ್ಲಿಟ್ಟುಕೊಂಡು, ಗೌರವಧನ ದ್ವಿಗುಣಗೊಳಿಸುವ ಮೂಲಕ ಗೌರವಾನ್ವಿತ ಹೆಚ್ಚಳ ಮಾಡಲು ನಾವು ನಿರ್ಧರಿಸಿದ್ದೇವೆ. ಇದನ್ನೂ ಓದಿ: ಬೆಂಗಳೂರಿಗರಿಗೆ ಮತ್ತೊಂದು ಶಾಕ್ – ಇಂದಿನಿಂದ ಆಟೋ ದರ ಏರಿಕೆ
ಶಿಕ್ಷಣ ಇಲಾಖೆ ಅಡಿಯಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಕೆಯಲ್ಲಿ ಕೆಲಸ ಮಾಡುವ ಅಡುಗೆಯವರ ಗೌರವಧನವನ್ನ ದ್ವಿಗುಣಗೊಳಿಸಲು ನಿರ್ಧರಿಸಲಾಗಿದೆ. ಬಿಸಿಯೂಟ ತಯಾರಕರ ಗೌರವಧನವನ್ನ 1,650 ರೂ.ಗಳಿಂದ 3,300 ರೂ.ಗಳಿಗೆ ಹೆಚ್ಚಿಸಲಾಗಿದೆ. ಅದೇ ಸಮಯದಲ್ಲಿ ಮಾಧ್ಯಮಿಕ/ಉನ್ನತ ಶಿಕ್ಷಣ ಶಾಲೆಯಲ್ಲಿ ಕೆಲಸ ಮಾಡುವ ರಾತ್ರಿ ಕಾವಲುಗಾರರ ಗೌರವಧನವನ್ನ 5000 ರಿಂದ 10,000 ರೂ.ಗಳಿಗೆ ದ್ವಿಗುಣಗೊಳಿಸಲು ನಿರ್ಧರಿಸಲಾಗಿದೆ. ಅಲ್ಲದೇ, ದೈಹಿಕ ಶಿಕ್ಷಣ ಮತ್ತು ಆರೋಗ್ಯ ಬೋಧಕರ ಗೌರವಧನವನ್ನ 8 ಸಾವಿರದಿಂದ 16,000 ರೂ. ಗಳಿಗೆ, ವಾರ್ಷಿಕ ವೇತನವನ್ನ 200 ರೂ.ಗಳಿಂದ 400 ರೂ.ಗಳಿಗೆ ಹೆಚ್ಚಿಸಲಾಗಿದೆ. ಇದು ಕಾರ್ಯನಿರತ ಸಿಬ್ಬಂದಿ ಮನೋಸ್ಥೈರ್ಯವನ್ನ ಹೆಚ್ಚಿಸುತ್ತದೆ ಎಂದು ನಿತೀಶ್ ಕುಮಾರ್ ತಿಳಿಸಿದ್ದಾರೆ.