– ರಾಯಚೂರು ಪೊಲೀಸರ ನೆರವಿಂದ ಬಿಹಾರ ಪೊಲೀಸರ ಕಾರ್ಯಾಚರಣೆ
ರಾಯಚೂರು: ಬಿಹಾರದಲ್ಲಿ (Bihar) ಕೊಲೆ, ಸುಲಿಗೆ, ಜೀವ ಬೆದರಿಕೆ ಸೇರಿದಂತೆ ಸುಮಾರು 18 ಪ್ರಕರಣದಲ್ಲಿ ಬೇಕಾಗಿದ್ದ, ತಲೆಮರೆಸಿಕೊಂಡಿದ್ದ ಆರೋಪಿಯನ್ನು ರಾಯಚೂರಿನಲ್ಲಿ (Raichur) ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಬಿಹಾರ ಮೂಲದ ಮನೋಜ್ ಸದಾ ಎಂದು ಗುರುತಿಸಲಾಗಿದೆ. ಈತ ನಕ್ಸಲ್ (Naxal) ಚಟುವಟಿಕೆಯಲ್ಲಿ ತೊಂಡಗಿರುವ ಶಂಕೆಯೂ ಇದೆ. ಬಿಹಾರದ ಖಗಾರಿಯಾ ಜಿಲ್ಲೆಯ ಅಲೌಲಿ ಠಾಣಾ ಪೊಲೀಸರು ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದು, ರಾಯಚೂರು ಗ್ರಾಮೀಣ ಠಾಣೆ ಪೊಲೀಸರ ನೆರವಿನೊಂದಿಗೆ ಆರೋಪಿಯನ್ನ ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ಬಿಹಾರದಿಂದ ತಲೆಮರೆಸಿಕೊಂಡು ಬಂದಿದ್ದ ಆರೋಪಿ ರಾಯಚೂರಿನ ಯರಮರಸ್ ಕೈಗಾರಿಕಾ ವಲಯದ ರೈಸ್ ಮಿಲ್ಲೊಂದರಲ್ಲಿ ಕೆಲಸ ಮಾಡುತ್ತಿದ್ದ. ಇದನ್ನೂ ಓದಿ: ಅಶ್ಲೀಲ ಕಾಮೆಂಟ್ ಕೇಸ್ – ಪೊಲೀಸರ ತನಿಖೆಗೆ ವಿಜಯಲಕ್ಷ್ಮಿ ನಿರಾಸಕ್ತಿ
ಆರೋಪಿ ಬಳಿ ಎಕೆ 47 ನಂತಹ ಶಸ್ತ್ರಾಸ್ತ್ರಗಳನ್ನ ಹೊಂದಿರುವ ಅನುಮಾನದ ಮೇಲೆ ಪೂರ್ವತಯಾರಿ ಮಾಡಿ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು. ಕಾರ್ಯಾಚರಣೆ ವೇಳೆ ಯಾವುದೇ ಶಸ್ತ್ರಾಸ್ತ್ರಗಳು ಪತ್ತೆಯಾಗಿಲ್ಲ. ಬಿಹಾರ ಪೊಲೀಸರು ಆರೋಪಿಯನ್ನ ಜಿಲ್ಲಾ ನ್ಯಾಯಾಲಯದ ಎದುರು ಹಾಜರು ಪಡಿಸಿ ತಮ್ಮ ಸುಪರ್ದಿಗೆ ಪಡೆದಿದ್ದಾರೆ. ಇದನ್ನೂ ಓದಿ: Bengaluru| ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಒಂದೂವರೆ ವರ್ಷದ ಮಗು ದುರ್ಮರಣ