ಲಾರಿಗೆ ಬೈಕ್ ಡಿಕ್ಕಿ – ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ದುರ್ಮರಣ

1 Min Read

– ಮತ್ತೋರ್ವನಿಗೆ ಗಂಭೀರ ಗಾಯ

ರಾಮನಗರ: ಲಾರಿಗೆ (Lorry) ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು (Students) ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮಾಗಡಿ (Magadi) ತಾಲೂಕಿನ ಮರೂರು ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.

ಅಭಿಷೇಕ್ (21), ಮನೋಜ್(21) ಮೃತ ವಿದ್ಯಾರ್ಥಿಗಳು. ಬೆಂಗಳೂರಿನ ಪಿಜಿಯಲ್ಲಿ ಇದ್ದು ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳು ಶುಕ್ರವಾರ ಬೆಂಗಳೂರಿನಿಂದ ಕುಣಿಗಲ್ ಕಡೆ ಒಂದೇ ಬೈಕ್‌ನಲ್ಲಿ (Bike) ಮೂವರು ನೈಟ್ ರೈಡ್ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಬೆಂಗಳೂರಿಂದ ತಿರುಪತಿಗೆ ಹೋರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

ಅಪಘಾತದಲ್ಲಿ ನವೀನ್ ಗಂಭೀರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಮೃತ ವಿದ್ಯಾರ್ಥಿಗಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮೀನುಗಾರಿಕೆಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ; ಇಂಧನ ಸಂಕಷ್ಟ, ಆಳ ಸಮುದ್ರ ಮೀನುಗಾರಿಕೆಗೆ ಆತಂಕ

Share This Article