ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಡಿಕ್ಕಿ- ಸವಾರ ಸಾವು

Public TV
1 Min Read

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಶೋಭಾ ಕರಂದ್ಲಾಜೆ (Shobha Karandlaje Car) ಅವರ ಕಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ಇಂದು ನಡೆದಿದೆ.

ಕೆಆರ್ ಪುರದ ಗಣೇಶ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಮೃತನನ್ನು ಪ್ರಕಾಶ್ (35) ಎಂದು ಗುರುತಿಸಲಾಗಿದೆ. ಇವರು ಕೆಆರ್ ಪುರ ನಿವಾಸಿ. ಇದನ್ನೂ ಓದಿ: 5,8,9ನೇ ತರಗತಿ ಪಬ್ಲಿಕ್ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ತಡೆ

ನಡೆದಿದ್ದೇನು..?: ನಿಂತಿದ್ದ ಶೋಭಾ ಕರಂದ್ಲಾಜೆ ಅವರ ಕಾರಿನ ಡೋರ್ ಒಪನ್ ಮಾಡುತ್ತಿದ್ದಾಗ ಬೈಕ್ ಏಕಾಏಕಿ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರ ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಕೆಆರ್ ಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಕಾಶ್ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು.

Share This Article