ಬೀದರ್ ಪೊಲೀಸರ ಕಾರ್ಯಾಚರಣೆ – 7 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ

Public TV
1 Min Read

-ನಾಲ್ವರು ದರೋಡೆಕೋರರ ಬಂಧನ

ಬೀದರ್: ಬೀದರ್ (Bidar) ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ದರೋಡೆಕೋರರನ್ನು ಬಂಧಿಸಿದ್ದಾರೆ. ಬಂಧಿತರಿಂದ 7 ಲಕ್ಷದ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

10 ಬೈಕ್ (Bike), 1 ಕಾರು (Car) ಹಾಗೂ ಬೆಳ್ಳಿಯ ಆಭರಣಗಳು ಸೇರಿದಂತೆ ಹಲವಾರು ವಸ್ತುಗಳನ್ನು ಬಂಧಿತರಿಂದ ವಶಪಡಿಸಿಕೊಳ್ಳಲಾಗಿದೆ. ಬಂಧಿತರೆಲ್ಲ ವಿವಿಧ ಪ್ರಕರಣದಲ್ಲಿ ಬೇಕಾಗಿದ್ದವರು ಎಂದು ತಿಳಿದು ಬಂದಿದೆ. ನಗರದಲ್ಲಿ ಹೆಚ್ಚುತ್ತಿದ್ದ ಕಳ್ಳತನವನ್ನು ಹತ್ತಿಕ್ಕಲು ಪೊಲೀಸರು ಹಲವು ದಿನಗಳಿಂದ ಬಂಧಿತ ಆರೋಪಿಗಳ ಮೇಲೆ ಕಣ್ಣಿಟ್ಟಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಜೆಪಿ ನಡ್ಡಾ, ಅಮಿತ್‌ ಮಾಳವೀಯ ವಿರುದ್ಧ ಪ್ರಿಯಾಂಕ್‌ ಖರ್ಗೆಯಿಂದ ಬೆಂಗಳೂರಿನಲ್ಲಿ ದೂರು

ಓರ್ವ ಆರೋಪಿಯಿಂದ 1 ಕಾರು ಹಾಗೂ 4 ಬೈಕ್‍ಗಳನ್ನು ಜಪ್ತಿ ಮಾಡಲಾಗಿದೆ. ಮತ್ತೊಬ್ಬನಿಂದ 6 ಬೈಕ್‍ಗಳನ್ನು ಜಪ್ತಿ ಮಾಡಲಾಗಿದೆ. ಒರ್ವ ಮನೆಗಳ್ಳನಿಂದ 18 ತೊಲೆ ಬೆಳ್ಳಿಯ ಆಭರಣಗಳು ಹಾಗೂ ಎರಡು ಟೈಲರಿಂಗ್ ಮಿಷನ್‍ಗಳನ್ನು ಜಪ್ತಿ ಮಾಡಲಾಗಿದೆ.

ಎಸ್ಪಿ ಚೆನ್ನಬಸವಣ್ಣ ಲಂಗೋಟಿ ಮಾರ್ಗದರ್ಶನದಲ್ಲಿ ನ್ಯೂ ಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಭಾಗಿಯಾದವರಿಗೆ ಗೌರವ ಧನ ನೀಡಿ ಅಭಿನಂದಿಸಿದ್ದಾರೆ. ಇದನ್ನೂ ಓದಿ: ಎನ್‌ಸಿಸಿಎಫ್, ನಾಫೆಡ್, ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ: ಸಿದ್ದರಾಮಯ್ಯ

Share This Article