ಬೆಂಗಳೂರಲ್ಲಿ ಮಳೆ ಎಫೆಕ್ಟ್‌; ಕಾರಿನ ಮೇಲೆ ಬಿದ್ದ ಮರದ ಕೊಂಬೆ – ಬೈಕ್‌ ಸವಾರ ಜಸ್ಟ್‌ ಮಿಸ್‌

By
1 Min Read

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ (Bengaluru Rains) ರಾತ್ರಿ ಸುರಿದ ಮಳೆ ಹಲವು ಅವಾಂತರ ಸೃಷ್ಟಿಸಿದೆ. ಎಲೆಕ್ಟ್ರಾನಿಕ್‌ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಕಾರಿನ ಮೇಲೆ ಮರದ ಕೊಂಬೆ ಬಿದ್ದಿತು. ಈ ವೇಳೆ ಬೈಕ್‌ ಸವಾರ ಜಸ್ಟ್‌ ಮಿಸ್‌ ಆಗಿದ್ದಾರೆ.

ರಸ್ತೆಯಲ್ಲಿ ವಾಹನಗಳು ಓಡಾಡುವಾಗ ಮರದ ಕೊಂಬೆ ಬಿದ್ದಿದೆ. ಇಬ್ಬರು ಬೈಕ್‌ ಸವಾರರು ಪಾಸ್‌ ಆದ ಕೆಲವೇ ಸೆಕೆಂಡುಗಳಲ್ಲಿ ಕೊಂಬೆ ಬಿದ್ದಿದೆ. ಅವರ ಹಿಂದೆಯೇ ಬರುತ್ತಿದ್ದ ಕಾರಿನ ಮೇಲೆ ಕೊಂಬೆ ಬಿದ್ದಿತು. ಘಟನೆಯ ದೃಶ್ಯ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ – ಕೆಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಪೀಣ್ಯದಲ್ಲೂ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬೃಹತ್‌ ಮರವೊಂದು ನೆಲಕ್ಕುರುಳಿದೆ. ಮರ ಬಿದ್ದ ರಭಸಕ್ಕೆ ವಿದ್ಯುತ್‌ ಕಂಬ ನೆಲಕ್ಕುರುಳಿದೆ. ಪರಿಣಾಮ ಪೀಣ್ಯ ಇಂಡಸ್ಟ್ರೀಸ್ ಭವನದಿಂದ ಹೆಚ್‌ಎಂಟಿ ಲೇಔಟ್ ಕಡೆಗೆ ಹೋಗುವ ರಸ್ತೆ ರಸ್ತೆ ಬಂದ್‌ ಆಯಿತು. ವಾಹನ ಸವಾರರು ಪರದಾಡುವಂತಾಯಿತು.

ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುತ್ತಿದೆ. ಇದನ್ನೂ ಓದಿ: ಖಾಸಗಿ ಶಾಲೆಗಳ ದಾಖಲಾತಿಗೆ ಸರ್ಕಾರದಿಂದ ರೂಲ್ಸ್ – ಪೋಷಕರ ಸಂದರ್ಶನ, ಮನಸೋ ಇಚ್ಛೆ ಫೀಸ್‌ಗೆ ಬ್ರೇಕ್

Share This Article