ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಜಗ್ಗನನ್ನು ಸಿಐಡಿ ಅಧಿಕಾರಿಗಳು (CID Officers) ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ರೌಡಿಶೀಟರ್ ಬಿಕ್ಲು ಶಿವ ಪ್ರಕರಣದ ತನಿಖೆ ಚುರುಕುಗೊಂಡಿದೆ. ಒಳಸಂಚು ಆರೋಪ ಹೊತ್ತಿರುವ ಜಗದೀಶ್ @ ಜಗ್ಗನನ್ನ ಸಿಐಡಿ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಮೊದಲು ವಿಚಾರಣೆಗೆ ಒಳಪಡಿಸಿದಾಗ ಬೈರತಿ ಬಸವರಾಜ್‌ಗೂ ನನಗೂ ಸಂಬಂಧವಿಲ್ಲ ಎಂದು ಹೇಳಿಕೊಂಡಿದ್ದ. ಇದೀಗ ನಟಿ ರಚಿತಾ ರಾಮ್‌ಗೂ ನನಗೂ ಸಂಬಂಧವಿಲ್ಲ ಎಂದು ಹೇಳಿಕೊಂಡಿದ್ದಾನೆ ಎನ್ನಲಾಗಿದೆ.ಇದನ್ನೂ ಓದಿ: ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ – ನನಗೂ ಬೈರತಿ ಬಸವರಾಜ್‌ಗೂ ಸಂಬಂಧವಿಲ್ಲ ಎಂದ ಎ1 ಜಗ್ಗ
ಮೂಲಗಳ ಪ್ರಕಾರ, ನಟಿ ರಚಿತಾ ರಾಮ್ (Rachita Ram) ಜೊತೆಗಿನ ಫೋಟೋಸ್ ಬಗ್ಗೆ ಸಿಐಡಿ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ. ಆದರೆ ಎ1 ಆರೋಪಿ ಜಗ್ಗ ನಟಿ ರಚಿತಾ ರಾಮ್‌ಗೂ ನನಗೂ ಸಂಪರ್ಕವಿಲ್ಲ. ರವಿ ಭೋಪಣ್ಣ ಸಿನಿಮಾ ಶೂಟಿಂಗ್ ವೇಳೆ ನಾನು ಅವರ ಜೊತೆ ಫೋಟೋ ತೆಗೆಸಿಕೊಂಡಿದ್ದೆ. ಆ ಸಮಯದಲ್ಲಿ ಅಭಿಮಾನಿಯಾಗಿ ಗಿಫ್ಟ್ ಕೊಟ್ಟಿದ್ದೆ. ಆದರೆ ಒಡವೆ ಬಗ್ಗೆ ಗೊತ್ತಿಲ್ಲ ಎಂದು ಹೇಳಿರುವುದಾಗಿ ತಿಳಿದುಬಂದಿದೆ.
ಸಿನಿಮಾ ಶೂಟಿಂಗ್ ಇರೋದು ಗೊತ್ತಾಗಿತ್ತು. ಹೀಗಾಗಿ ಗಿಪ್ಟ್ ಕೊಟ್ಟಿದ್ದೆ. ನನ್ನ ಸ್ನೇಹಿತರ ಮೂಲಕ ಸಿನಿಮಾ ಶೂಟಿಂಗ್ ಸ್ಥಳಕ್ಕೆ ಹೋಗಿದ್ದೆ ಎಂದಿದ್ದಾನೆ ಎನ್ನಲಾಗಿದೆ.ಇದನ್ನೂ ಓದಿ: ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ – ಆರೋಪಿ ಜಗ್ಗ 10 ದಿನ ಸಿಐಡಿ ಕಸ್ಟಡಿಗೆ