ಸಿಂಧೂ ನೀರು ಪಾಕ್‌ಗೆ ಹರಿಯಬೇಕು, ಇಲ್ಲದಿದ್ರೆ ಭಾರತೀಯರ ರಕ್ತ ಹರಿಯುತ್ತೆ: ಬಿಲಾವಲ್‌ ಭುಟ್ಟೋ

Public TV
1 Min Read

– ಭಾರತದ ವಿರುದ್ಧ ನಾಲಿಗೆ ಹರಿಬಿಟ್ಟ ಪಾಕಿಸ್ತಾನ ಪೀಪಲ್ಸ್‌ ಪಾರ್ಟಿ ನಾಯಕ

ಇಸ್ಲಾಮಾಬಾದ್: ಸಿಂಧೂ (Indus) ನಮ್ಮದು. ನದಿ ನೀರು ಪಾಕಿಸ್ತಾನಕ್ಕೆ ಹರಿಯಬೇಕು. ಇಲ್ಲವಾದಲ್ಲಿ ಭಾರತೀಯರ ರಕ್ತ ಹರಿಯುತ್ತದೆ ಎಂದು ಪಾಕಿಸ್ತಾನ ಪೀಪಲ್ಸ್‌ ಪಾರ್ಟಿ ಅಧ್ಯಕ್ಷ ಬಿಲಾವಲ್‌ ಭುಟ್ಟೋ (Bilawal Bhutto) ನಾಲಿಗೆ ಹರಿಬಿಟ್ಟಿದ್ದಾರೆ.

ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಭುಟ್ಟೋ, ಸಿಂಧೂ ನಮ್ಮದು. ಅದು ನಮ್ಮದೇ ಆಗಿರುತ್ತದೆ ಎಂದು ನಾನು ಭಾರತಕ್ಕೆ ಹೇಳಲು ಬಯಸುತ್ತೇನೆ. ನಮ್ಮ ನೀರು ಅದರ ಮೂಲಕ ಹರಿಯುತ್ತದೆ. ಇಲ್ಲದಿದ್ದರೆ ಅವರ ರಕ್ತ ಹರಿಯುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಸಿಂಧೂ ನದಿ ನೀರು ಹಂಚಿಕೆ ಒಪ್ಪಂದಕ್ಕೆ ಬ್ರೇಕ್‌ – ಪಾಕಿಸ್ತಾನಕ್ಕೆ ಅಧಿಕೃತ ರಾಜತಾಂತ್ರಿಕ ಟಿಪ್ಪಣಿ ಕಳುಹಿಸಿದ ಭಾರತ

ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಮಾರಕ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಸಿಂಧೂ ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಭಾರತದ ವಿರುದ್ಧ ಭುಟ್ಟೋ ಮಾತನಾಡಿದ್ದಾರೆ.

ಪಹಲ್ಗಾಮ್ ದಾಳಿಗೆ ಪಾಕಿಸ್ತಾನವನ್ನು ಬಲಿಪಶು ಮಾಡಲಾಗುತ್ತಿದೆ. ಆ ಮೂಲಕ ಭಾರತ ತನ್ನ ಆಂತರಿಕ ಭದ್ರತಾ ಲೋಪಗಳಿಂದ ಗಮನವನ್ನು ಬೇರೆಡೆ ಸೆಳೆಯುತ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬಲೂಚ್ ಲಿಬರೇಶನ್ ಆರ್ಮಿಯಿಂದ ಐಇಡಿ ದಾಳಿ – ಆಕ್ರಮಿತ ಪಾಕಿಸ್ತಾನಿ ಸೇನೆಯ 10 ಸಿಬ್ಬಂದಿ ಹತ್ಯೆ

ಭಾರತವು ಇಸ್ಲಾಮಾಬಾದ್ ಜೊತೆಗಿನ ರಾಜತಾಂತ್ರಿಕ ಸಂಬಂಧಗಳನ್ನು ನಿಲ್ಲಿಸಿದೆ. ಪಾಕಿಸ್ತಾನಿ ಮಿಲಿಟರಿ ಅಟ್ಯಾಚ್‌ಗಳನ್ನು ಹೊರಹಾಕುವುದು, ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದು, ಅಟ್ಟಾರಿ ಭೂ ಸಾರಿಗೆ ಪೋಸ್ಟ್ ಅನ್ನು ಮುಚ್ಚುವುದು ಸೇರಿದಂತೆ ಹಲವಾರು ರಾಜತಾಂತ್ರಿಕ ಮತ್ತು ಆರ್ಥಿಕ ಕ್ರಮಗಳನ್ನು ಕೈಗೊಂಡಿದೆ.

Share This Article