ಬಿಟ್ ಕಾಯಿನ್ ಮರು ತನಿಖೆ – ಎಸ್ಪಿ ಶರತ್ ಹೆಸರು ಕೈಬಿಟ್ಟ ಸರ್ಕಾರ

Public TV
1 Min Read

ಬೆಂಗಳೂರು: ಬಿಟ್ ಕಾಯಿನ್ (Bitcoin) ಮರು ತನಿಖೆಗೆ ಎಸ್‍ಐಟಿ ರಚನೆ ವಿಚಾರದಲ್ಲಿ ತನಿಖೆಗೂ (Investigation) ಮೊದಲೇ ವಿಘ್ನ ಶುರುವಾಗಿದೆ. ತನಿಖಾ ತಂಡದ ಸದಸ್ಯರ ಹೆಸರನ್ನು ಕೈಬಿಟ್ಟು ಸರ್ಕಾರ ಆದೇಶ ಹೊರಡಿಸಿದೆ. ಎಸ್ಪಿ ಶರತ್ ಅವರನ್ನು ತನಿಖಾ ತಂಡದ ಸದಸ್ಯರ ಪಟ್ಟಿಯಿಂದ ಸರ್ಕಾರ ತೆರವು ಮಾಡಿದೆ.

ಈ ಹಿಂದೆ ಎಸ್ಪಿ ಶರತ್ ವಿರುದ್ಧ ಸಿಸಿಬಿ ತನಿಖಾಧಿಕಾರಿ ಶ್ರೀಧರ್ ಪೂಜಾರ್ ಮತ್ತು ಆಗಿನ ಕಮಿಷನರ್ ಕಮಲ್ ಪಂಥ್ ದೂರು ನೀಡಿದ್ದರು. ಎಸ್‍ಐಟಿ (SIT) ತಂಡ ರಚನೆಯಾದಾಗ ಅಧಿಕಾರಿಗಳಲ್ಲಿ ಸಾಕಷ್ಟು ಅಸಮಾಧಾನ ಸಹ ಇತ್ತು. ಈ ಬಗ್ಗೆ ದಾಖಲೆ ಸಮೇತ `ಪಬ್ಲಿಕ್ ಟಿವಿ’ ಸುದ್ದಿ ಪ್ರಸಾರ ಮಾಡಿತ್ತು. ಈ ಬೆನ್ನಲ್ಲೇ ತನಿಖಾ ತಂಡದಿಂದ ಸರ್ಕಾರ ಆದೇಶ ಮಾಡಿದೆ. ಇದನ್ನೂ ಓದಿ: ಪೊಲೀಸ್ ಸಿಬ್ಬಂದಿಯಿಂದ ಕಿರುಕುಳ ಆರೋಪ – ಎಸ್ಪಿ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಬಿಟ್ ಕಾಯಿನ್ ಹಗರಣ ರಾಜ್ಯದಲ್ಲಿ ಕೋಲಾಹಲ ಎಬ್ಬಿಸಿತ್ತು. ಇದರಲ್ಲಿ ಕೆಲವು ಪ್ರಭಾವಿ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಕೈ ಜೋಡಿಸಿದ್ದಾರೆ ಎಂಬ ವದಂತಿ ದಟ್ಟವಾಗಿತ್ತು. ಈ ಹಗರಣದ ಸೂತ್ರಧಾರ ಎನ್ನಲಾಗಿದ್ದ ಅಂತಾರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ನಂತರ ಬಿಡುಗಡೆ ಮಾಡಿದ್ದರು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರುತ್ತಿದ್ದಂತೆ ಬಿಟ್ ಕಾಯಿನ್ ಹಗರಣದ ಮರು ತನಿಖೆಗೆ ಆದೇಶಿಸಿತ್ತು. ಇದನ್ನೂ ಓದಿ: ಜು.19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ – ಲಕ್ಷ್ಮಿ ಹೆಬ್ಬಾಳ್ಕರ್‌

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್