Exit Polls: ಪಶ್ಚಿಮ ಬಂಗಾಳದಲ್ಲಿ ದೀದಿ ಹಿಂದಿಕ್ಕಿದ ಮೋದಿ

Public TV
1 Min Read

ನವದೆಹಲಿ: 2019 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದ ಬಿಜೆಪಿ ಈ ಬಾರಿಯೂ ಅದೇ ಓಟವನ್ನು ಮುಂದುವರಿಸಿದೆ. ಈ ಸಲ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ನ್ನು ಹಿಂದಿಕ್ಕಲಿದೆ ಎಂದು ಸಮೀಕ್ಷೆಗಳು ತಿಳಿಸಿವೆ.

ಜನ್‌ ಕಿ ಬಾತ್‌ ಬಿಜೆಪಿಗೆ 22-26 ಹಾಗೂ ತೃಣಮೂಲ ಕಾಂಗ್ರೆಸ್‌ಗೆ (ಟಿಎಂಸಿ) 16-18, ಕಾಂಗ್ರೆಸ್‌ಗೆ 0-2 ಸ್ಥಾನಗಳನ್ನು ನೀಡಿದೆ.

ಇಂಡಿಯಾ ನ್ಯೂಸ್-ಡಿ-ಡೈನಾಮಿಕ್ಸ್: ಬಿಜೆಪಿ 21, ಟಿಎಂಸಿ 19, ಕಾಂಗ್ರೆಸ್‌ – 2.

ಮ್ಯಾಟ್ರಿಜ್: ಬಿಜೆಪಿ 21-25, ಟಿಎಂಸಿ 16-20, ಕಾಂಗ್ರೆಸ್‌ 0-1.

2019 ರಲ್ಲಿ ಬಂಗಾಳದ 42 ಸ್ಥಾನಗಳ ಪೈಕಿ ಬಿಜೆಪಿ 18 ಹಾಗೂ ಟಿಎಂಸಿ 22 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದವು. ಈ ಬಾರಿ ರಾಜ್ಯದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ. 22 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ಕಾಂಗ್ರೆಸ್‌ ಕಳೆದ ಚುನಾವಣೆಯಲ್ಲಿ 2 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿಯೂ ಅಷ್ಟೇ ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆಗಳು ಹೇಳಿವೆ.

Share This Article