ಮುಸ್ಲಿಂ ಸ್ಪೀಕರ್‌ಗೆ ಬಿಜೆಪಿಯವರೂ ನಮಸ್ಕರಿಸುತ್ತಾರೆ: ಜಮೀರ್ ಮತ್ತೊಂದು ಎಡವಟ್ಟು

Public TV
2 Min Read

ಬೆಂಗಳೂರು: ತೆಲಂಗಾಣದಲ್ಲಿ (Telangana) ಚುನಾವಣಾ ಭಾಷಣದ ವೇಳೆ ಸಚಿವ ಜಮೀರ್ ಅಹಮದ್ (Zameer Ahmed Khan) ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಮುಸ್ಲಿಂ ಸ್ಪೀಕರ್ ಯುಟಿ ಖಾದರ್‌ಗೆ (UT Khader) ಈಗ ಬಿಜೆಪಿಯವರೂ (BJP) ನಮಸ್ಕರಿಸುತ್ತಾರೆನ್ನುವ ಮೂಲಕ ವಿವಾದವನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದಾರೆ.

ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿ ಭಾಷಣದ ವೇಳೆ ಹೇಳಿಕೆ ನೀಡಿದ ಜಮೀರ್, ಮುಸ್ಲಿಮರಲ್ಲಿ 17 ಮಂದಿಗೆ ಟಿಕೆಟ್ ನೀಡಲಾಗಿತ್ತು. ಈ ಪೈಕಿ 7 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಅದರಲ್ಲಿ 5 ಜನರಿಗೆ ಕಾಂಗ್ರೆಸ್ ಅಧಿಕಾರ ನೀಡಿದೆ. ನನಗೆ 3 ಖಾತೆ ನೀಡಿ ಮಂತ್ರಿ ಮಾಡಿದೆ. ರಹೀಂ ಖಾನ್ ಮಂತ್ರಿಯಾಗಿದ್ದಾರೆ. ಸಲೀಂ ಅಹ್ಮದ್ ವಿಪ್ ಆಗಿದ್ದಾರೆ. ನಸೀರ್ ಅಹ್ಮದ್ ಸಿಎಂ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ ಎಂದು ಹೇಳಿದರು.

ರಾಜಕೀಯ ಇತಿಹಾಸದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿರಲಿಲ್ಲ. ಈಗ ಮೊದಲ ಬಾರಿಗೆ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿದ್ದು ಕಾಂಗ್ರೆಸ್ ಪಕ್ಷ. ಈಗ ದೊಡ್ಡ ದೊಡ್ಡ ಬಿಜೆಪಿ ನಾಯಕರು ಕೂಡಾ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕಾರ ಎನ್ನುತ್ತಾರೆ. ಇದನ್ನು ಮಾಡಿದ್ದು ಯಾರು? ಕಾಂಗ್ರೆಸ್ ಪಕ್ಷ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ. ಇದನ್ನೂ ಓದಿ: ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಭಾಗ್ಯ: ಮಧು ಬಂಗಾರಪ್ಪ

ಕಳೆದ ಕೆಲ ದಿನಗಳ ಹಿಂದಷ್ಟೇ ಜಮೀರ್ ರಾಜಸ್ಥಾನದಲ್ಲಿ ಮಾತನಾಡುತ್ತಾ ಕರ್ನಾಟಕದಲ್ಲಿ ಕಾಂಗ್ರೆಸ್ ಮುಸ್ಲಿಂ ಮತಗಳಿಂದಲೇ ಅಧಿಕಾರಕ್ಕೆ ಬಂದಿದೆ ಎಂದಿದ್ದರು. ಈ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. ಕರ್ನಾಟಕದ ಮಸೀದಿಗಳಲ್ಲಿ ನಾವು ಸಭೆ ಮಾಡಿ ಒಗ್ಗಟ್ಟು ಪ್ರದರ್ಶನಕ್ಕೆ ಮನವಿ ಮಾಡಿದ್ದೆವು. ಹೀಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ರಾಜಸ್ಥಾನದಲ್ಲೂ ಇದೇ ಸೂತ್ರ ಅನುಸರಿಸಿ ಎಂದು ಕರೆ ನೀಡಿದ್ದರು. ಇದನ್ನೂ ಓದಿ: ನಾಲ್ವರ ಕೊಂದ ಆರೋಪಿ ಮೇಲೆ ಜನಾಕ್ರೋಶ; ರಸ್ತೆ ತಡೆದು ಸಾರ್ವಜನಿಕರ ಪ್ರತಿಭಟನೆ, ಲಾಠಿ ಪ್ರಹಾರ – ಉಡುಪಿ ಉದ್ವಿಗ್ನ

Share This Article