ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ

By
1 Min Read

ನವದೆಹಲಿ: ಮುಂಬರುವ 2024ರ ಲೋಕಸಭಾ ಚುನಾವಣೆಯ (Loksabha Election 2024) ಹಿನ್ನೆಲೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷದ (BJP) ರಾಜ್ಯಾಧ್ಯಕ್ಷರನ್ನು ಬದಲಾಯಿಸಲಾಗಿದೆ.

ಆಂಧ್ರಪ್ರದೇಶಕ್ಕೆ ಡಿ. ಪುರಂದೇಶ್ವರಿ, ತೆಲಂಗಾಣಕ್ಕೆ ಕಿಶನ್ ರೆಡ್ಡಿ, ಪಂಜಾಬ್‍ಗೆ ಸುನಿಲ್ ಜಾಖರ್ ಹಾಗೂ ಜಾರ್ಖಂಡ್‍ನಲ್ಲಿ ಬಾಬುಲಾಲ್ ಮರಾಂಡಿಗೆ ಅಧ್ಯಕ್ಷ ಸ್ಥಾನ ನೀಡಲಾಗಿದೆ. ನಾಲ್ಕು ರಾಜ್ಯಗಳಲ್ಲಿ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಿ ಜೆ.ಪಿ ನಡ್ಡಾ (J.P Nadda) ಆದೇಶ ಹೊರಡಿಸಿದ್ದಾರೆ.

ತೆಲಂಗಾಣದಲ್ಲಿ (Telangana) ಬಂಡಿ ಸಂಜಯ್ ಕುಮಾರ್ ಬದಲು ಇನ್ನು ಮುಂದೆ ಜಿ ಕಿಶನ್ (G Kishan Reddy) ರೆಡ್ಡಿ  ಪಕ್ಷವನ್ನು ಮುನ್ನಡೆಸಲಿದ್ದಾರೆ. ತೆಲುಗು ದೇಶಂ ಪಕ್ಷದ ಸಂಸ್ಥಾಪಕ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್‌ಟಿ ರಾಮರಾವ್ ಅವರ ಪುತ್ರಿ ದಗ್ಗುಬಾಟಿ ಪುರಂದೇಶ್ವರಿ (Daggubati Purandeswari,)ಅವರನ್ನು ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಕಳೆದ ವರ್ಷ ಮೇ ತಿಂಗಳಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದಿರುವ ಸುನೀಲ್ ಕುಮಾರ್ ಜಾಖರ್ (Sunil Kumar Jakhar) ಅವರು ಪಂಜಾಬ್‌ನಲ್ಲಿ ಪಕ್ಷವನ್ನು ಮುನ್ನಡೆಸಲಿದ್ದಾರೆ. ಜಾರ್ಖಂಡ್ (Jharkhand) ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ (Babulal Marandi) ಅವರು ಜಾರ್ಖಂಡ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.  ಇದನ್ನೂ ಓದಿ: ಹೆಚ್‍ಡಿಕೆ ಪಾಪ ಬೇಸರದಲ್ಲಿ ಇದ್ದಾರೆ: ಡಿಕೆಶಿ ವ್ಯಂಗ್ಯ

ಎಲ್ಲಾ ರಾಜ್ಯ ಅಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಉಸ್ತುವಾರಿಗಳ ಸಭೆಯನ್ನು ಬಿಜೆಪಿ ಜುಲೈ 7 ರಂದು ಕರೆದಿದೆ. ಈ ಸಭೆಯ ಅಧ್ಯಕ್ಷತೆಯನ್ನು  ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ವಹಿಸಲಿದ್ದಾರೆ.

ರಾಜ್ಯದಲ್ಲಿ ಕೂಡ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಈ ಹಿಂದೆಯೇ ಕೇಳಿಬಂದಿತ್ತು. ಆದರೆ ಇದು ಊಹಪೋಹ ಎಂದು ಹೇಳಲಾಗಿತ್ತು. ಈ ನಡುವೆ ಇದೀಗ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಹೆಸರು ಕೂಡ ಕೇಳಿ ಬಂದಿದ್ದು, ಆದರೆ ಕರ್ನಾಟಕದ ರಾಜ್ಯಾಧ್ಯಕ್ಷರ ಬದಲಾವಣೆಯಾಗಿಲ್ಲ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್