ಲಿಂಗಾಯತರ ವಿರುದ್ಧ ಸಿಎಂ ಪದೇ ಪದೇ ದ್ವೇಷ ಸಾಧಿಸುತ್ತಿದ್ದಾರೆ: ಬಿಜೆಪಿ ಟೀಕೆ

Public TV
2 Min Read

ಬೆಂಗಳೂರು: ಕಾಂಗ್ರೆಸ್‍ನಲ್ಲಿ (Congress) ಲಿಂಗಾಯತ ಸಿಎಂ ಚರ್ಚೆ ವಿಚಾರವಾಗಿ ಬಿಜೆಪಿ (BJP) ಸರಣಿ ಟ್ವೀಟ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಕಾಲೆಳೆದಿದೆ.

ಸಿದ್ದರಾಮಯ್ಯ ಈಗ ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ ಅಧಿಕಾರಿಗಳನ್ನು ಕಡೆಗಣಿಸುತ್ತಿದ್ದಾರೆ. ಈ ಸತ್ಯವನ್ನು ಅವರದೇ ಪಕ್ಷದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರು ದೂರಿದ್ದಾರೆ. ವೀರಶೈವ-ಲಿಂಗಾಯತ ಸಮುದಾಯದವರಿಗೆ ಸಿಎಂ ಕುರ್ಚಿ ನೀಡಿ ಎನ್ನುವ ಮೂಲಕ ಸಿದ್ದರಾಮಯ್ಯ ನಾಯಕತ್ವದಲ್ಲಿ ತಮಗೆ ನಂಬಿಕೆ ಹಾಗೂ ವಿಶ್ವಾಸವಿಲ್ಲ ಎಂಬ ಸತ್ಯವನ್ನು ಅವರು ಪುನರುಚ್ಛರಿಸಿದ್ದಾರೆ ಎಂದು ಬಿಜೆಪಿ ಬರೆದುಕೊಂಡಿದೆ. ಇದನ್ನೂ ಓದಿ: ಮತ್ತೆ ಕಾಂಗ್ರೆಸ್‌ನಲ್ಲಿ ಲಿಂಗಾಯತ ಬಾಂಬ್‌: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗ್ತಾರಾ ಸಿಎಂ?

ತಮ್ಮ ಸಮುದಾಯ ಸಣ್ಣ ಸಂಖ್ಯೆಯಲ್ಲಿರುವ ಕಾರಣ ತಮಗೆ ಮಂತ್ರಿ ಸ್ಥಾನ ತಪ್ಪಿತು ಎಂಬುದನ್ನು ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿಯವರು ನೋವು ತೋಡಿಕೊಂಡಿದ್ದರು. ಸಣ್ಣ ದಲಿತ ಸಮುದಾಯಗಳಿಗೆ ಸಿದ್ದರಾಮಯ್ಯರವರ ಮಂತ್ರಿ ಮಂಡಲದಲ್ಲಿ ಸ್ಥಾನವಿಲ್ಲ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ. ಒಟ್ಟಿನಲ್ಲಿ ಇವರ ನಾಯಕತ್ವ ಮತ್ತವರ ತುಷ್ಟೀಕರಣದ ರಾಜಕಾರಣ ಹಾಗೂ ಸ್ವಜನ ಪಕ್ಷಪಾತದಿಂದ ಕೈ ಪಕ್ಷದ ನಾಯಕರೇ ರೋಸಿ ಹೋಗಿರುವುದು ಅವರ ಹೇಳಿಕೆಗಳಿಂದಲೇ ಸಾಬೀತಾಗುತ್ತಿದೆ ಎಂದು ಟ್ವಿಟ್ಟರ್‌ನಲ್ಲಿ ಬಿಜೆಪಿ ಕಿಡಿಕಾರಿದೆ.

ಮತ್ತೊಬ್ಬರನ್ನು ರಾಜಕೀಯವಾಗಿ ತುಳಿಯುವ ಗುಣದ ಸಿದ್ದರಾಮಯ್ಯನವರು 2013ರಲ್ಲಿ ಕೊರಟಗೆರೆಯಲ್ಲಿ ಪರಮೇಶ್ವರ್ ಅವರು ಸೋಲುವಂತೆ ನೋಡಿಕೊಂಡಿದ್ದರು.ಇದೀಗ ಅವರ ಗೃಹ ಇಲಾಖೆಗೆ ಉಳಿದವರು ಹಸ್ತಕ್ಷೇಪ ಮಾಡಲು ಕುಮ್ಮಕ್ಕು ನೀಡಿ ಉದ್ದೇಶಪೂರ್ವಕವಾಗಿ ಅವರನ್ನು ಡಮ್ಮಿ ಮಂತ್ರಿ ಮಾಡಿ ಕೂರಿಸಿದ್ದಾರೆ. ವಿಪಕ್ಷ ನಾಯಕ ಸ್ಥಾನದ ಹುದ್ದೆಗೆ ಅಡ್ಡಗಾಲಾಗಿದ್ದರು ಎಂಬ ಏಕೈಕ ಕಾರಣಕ್ಕೆ ಮಲ್ಲಿಕಾರ್ಜುನ ಖರ್ಗೆಯವರನ್ನು ಲೋಕಸಭೆಗೆ ಕಳುಹಿಸಿದ ಸ್ವಾರ್ಥಿ ಸಿದ್ದರಾಮಯ್ಯರವರು ಎಂದು ವ್ಯಂಗ್ಯ ಮಾಡಿದೆ.

ರಾಜ್ಯದ ವೀರಶೈವ-ಲಿಂಗಾಯತ ಸಮುದಾಯದ ವಿರುದ್ಧ ಪದೇ ಪದೇ ದ್ವೇಷ ಕಾರಿಕೊಳ್ಳುವ ಸಿಎಂ, ಚುನಾವಣೆಗೂ ಮುನ್ನ ಸಮುದಾಯದ ನಾಯಕರನ್ನು ಭ್ರಷ್ಟರು ಎಂದು ಜರಿದಿದ್ದರು. ಇದನ್ನು ರಾಜ್ಯದ ಜನ ಇನ್ನೂ ಮರೆತಿಲ್ಲ ಎಂಬುದನ್ನು ಅವರು ಅರಿತುಕೊಳ್ಳುವುದು ಒಳಿತು ಎಂದು ಬಿಜೆಪಿ ಬರೆದುಕೊಂಡಿದೆ. ಇದನ್ನೂ ಓದಿ: 10 ಸಾವಿರ ಕೋಟಿ ಮೀಸಲು – ಮುಸ್ಲಿಂ ಮುಖಂಡರನ್ನು ಸೆಳೆಯಲು ಕಾಂಗ್ರೆಸ್‌ನಿಂದ ಭರಪೂರ ಅನುದಾನದ ಭರವಸೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್