ಆಪ್, ಕಾಂಗ್ರೆಸ್ ನಿರ್ಧಾರದಿಂದ ಬಿಜೆಪಿಗೆ ಲಾಭ – ಸಚಿವ ಚಲುವರಾಯಸ್ವಾಮಿ

Public TV
1 Min Read

ಮಂಡ್ಯ: ಆಪ್, ಕಾಂಗ್ರೆಸ್ ನಿರ್ಧಾರದಿಂದ ಬಿಜೆಪಿ ಲಾಭ ಪಡೆದಿದೆ ಅಷ್ಟೇ ಎಂದು ಸಚಿವ ಚಲುವರಾಯಸ್ವಾಮಿ (Chaluvarayaswamy) ಹೇಳಿದರು.

ಮಂಡ್ಯದಲ್ಲಿ (Mandya) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಂಪಾದನೆ ವಿಚಾರವಾಗಿ, ದೆಹಲಿ ಫಲಿತಾಂಶದಲ್ಲಿ ವಿಶೇಷ ಏನಿಲ್ಲ. ಕೇಜ್ರಿವಾಲ್ ಇಂಡಿಯಾ ಒಕ್ಕೂಟದ ಜೊತೆ ಹೋಗಿದ್ದರೆ ಬಿಜೆಪಿಗೆ ಗೆಲ್ಲುವ ಅವಕಾಶ ಇರಲಿಲ್ಲ. ಆದರೆ ಕೇಜ್ರಿವಾಲ್ ಸ್ವಲ್ಪ ದುಡುಕಿ ನಿರ್ಧಾರ ಮಾಡಿದರು. ಹೀಗಾಗಿ ಆಪ್, ಕಾಂಗ್ರೆಸ್ ನಿರ್ಧಾರದಿಂದ ಬಿಜೆಪಿ ಲಾಭ ಪಡೆದಿದೆ ಎಂದರು.ಇದನ್ನೂ ಓದಿ: ಸೋಲು ಒಪ್ಕೋತೀವಿ ಆದ್ರೆ ಇವಿಎಂ ಮೇಲೆ ಅನುಮಾನ ಇದೆ: ಶಿವರಾಜ್ ತಂಗಡಗಿ

ರಾಜ್ಯ ಬಜೆಟ್ ವಿಚಾರ:
ಕಳೆದ ಬಾರಿಯೂ ಕೃಷಿ ಇಲಾಖೆಗೆ ಹೊಸ ಕಾರ್ಯಕ್ರಮಗಳ ಮೂಲಕ ಉತ್ತೇಜನ ನೀಡಿದ್ದರು. ಈ ಬಾರಿಯೂ ಉತ್ತಮ ಕಾರ್ಯಕ್ರಮಗಳು ಸಿಗುವ ನಿರೀಕ್ಷೆ ಇದೆ. ಇನ್ನೂ ಸಚಿವಾಕಾಂಕ್ಷಿಗಳಿಗೆ ನಿಗಮ ಮಂಡಳಿ ನೀಡಿ ಸಮಾಧಾನಪಡಿಸಿರುವ ವಿಚಾರವಾಗಿ, ಸಚಿವಾಕಾಂಕ್ಷಿಗಳಿಗೆ ಮುಂದಿನ ದಿನಗಳಲ್ಲಿ ಅವಕಾಶ ಸಿಗಲಿದೆ. ಪೊಲ್ಯೂಷನ್ ಕಂಟ್ರೋಲ್ ಬೋರ್ಡ್ ಛೇರ್ಮನ್ ಒಳ್ಳೆಯ ಹುದ್ದೆಯಾಗಿದ್ದು, ರಾಜ್ಯಾದ್ಯಂತ ಕೆಲಸ ಮಾಡಲು ಉತ್ತಮ ಅವಕಾಶವಿದೆ. ನರೇಂದ್ರ ಸ್ವಾಮಿಯವರು ಎಂಜಿನಿಯರ್ ಆಗಿದ್ದರಿಂದ ಅವಕಾಶ ಸಿಕ್ಕಿದೆ ಎಂದರು.

ಮಂಡ್ಯ ಮಿಮ್ಸ್ ಸಮಸ್ಯೆಯ ಆಗರ:
ಮಿಮ್ಸ್‌ನಲ್ಲಿ (MIMS) ತುಂಬಾ ಸಮಸ್ಯೆ ಇದೆ. ಹೀಗಾಗಿ ಡಿಸಿ ಮೂಲಕ ಸಮಸ್ಯೆಗಳ ಪಟ್ಟಿ ಮಾಡಿಸಲಾಗಿದೆ. ಮಿಮ್ಸ್‌ಗೆ ಮೇಜರ್ ಸರ್ಜರಿ ಆಗಬೇಕು. ವೈದ್ಯಕೀಯ ಶಿಕ್ಷಣ ಸಚಿವರ ಜೊತೆ ಶೀಘ್ರವೇ ಸಭೆ ನಡೆಸುತ್ತೇನೆ ಎಂದು ತಿಳಿಸಿದರು.

ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, 27 ವರ್ಷಗಳ ಬಳಿಕ ಬಿಜೆಪಿ ಅಧಿಕಾರಕ್ಕೇರಿದೆ. ಆದ್ರೆ ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿದ್ದ ಆಪ್ ಸೋಲು ಕಂಡಿದ್ದರೆ, `ಕೈ’ ಪಾಳಯ ಸತತ 3ನೇ ಬಾರಿಗೆ ಶೂನ್ಯ ಸಂಪಾದನೆ ಮಾಡಿದೆ.ಇದನ್ನೂ ಓದಿ: ಡಿಬಾಸ್ ಫ್ಯಾನ್ಸ್‌ಗೆ ಸಿಹಿಸುದ್ದಿ- ಫೆ.16ರಂದು ರಿಲೀಸ್ ಆಗಲಿದೆ ‘ಡೆವಿಲ್’ ಚಿತ್ರದ ಟೀಸರ್

 

Share This Article