ದಾವಣಗೆರೆಯಲ್ಲಿ ಬಿಜೆಪಿ, ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಮುನ್ನಡೆ – ಶಾಮನೂರು ಶಿವಶಂಕರಪ್ಪ ಮೊಮ್ಮಗನಿಗೆ ಹಿನ್ನಡೆ

1 Min Read

ಬೆಂಗಳೂರು: ಕರ್ನಾಟಕದಲ್ಲಿ 2 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ದಾವಣಗೆರೆ ದಕ್ಷಿಣದಲ್ಲಿ (Davanagere South) ಬಿಜೆಪಿ ಹಾಗೂ ಬಾಗಲಕೋಟೆಯಲ್ಲಿ (Bagalakote) ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿವೆ.

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು. ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಮೂರನೇ ಸುತ್ತಿನಲ್ಲಿ 4800 ಮತಗಳ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಮಲ್ಲಿಕಾರ್ಜುನ್‌ ಹಿನ್ನಡೆ ಅನುಭವಿಸಿದ್ದಾರೆ. ಇದನ್ನೂ ಓದಿ: ದಾವಣಗೆರೆ ಉಪಚುನಾವಣೆ: ಸ್ಟ್ರಾಂಗ್ ರೂಂ ಓಪನ್ ಮಾಡಲು ಪರದಾಡಿದ ಅಧಿಕಾರಿಗಳು

ಬಾಲಕೋಟೆಯಲ್ಲಿ 6ನೇ ಸುತ್ತಿನ ಮತ ಎಣಿಕೆ ಪೂರ್ಣ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ – 32,363 ಹಾಗೂ ಬಿಜೆಪಿ – 16,906 ಮತ ಪಡೆದಿವೆ. 15,457 ಮತಗಳಿಂದ ಕಾಂಗ್ರೆಸ್ ಮುನ್ನಡೆಯಲ್ಲಿದೆ.

Share This Article