ಹೈದರಾಬಾದ್ ಗ್ಯಾಂಗ್ ರೇಪ್ ತನಿಖೆ CBIಗೆ ವಹಿಸುವಂತೆ ಬಿಜೆಪಿ ಒತ್ತಾಯ

Public TV
1 Min Read

ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್, ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಯಾವುದೇ ಹಿನ್ನೆಲೆಯುಳ್ಳವರಾಗಿದ್ದರೂ ಶೀಘ್ರವೇ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಶ್ರೀರಂಗಪಟ್ಟಣ ಮಸೀದಿ ವಿವಾದ – ಹಿಂದೂ, ಮುಸ್ಲಿಮರ ವಾದ ಏನು? 

ಇದಕ್ಕೆ ಪ್ರತಿಕ್ರಿಯಿಸಿರುವ ತೆಲಂಗಾಣ ಗೃಹ ಸಚಿವ ಮೊಹಮ್ಮದ್ ಅಲಿ, ಇದೊಂದು ಘೋರ ಘಟನೆ. ಎಲ್ಲ ಅಪರಾಧಿಗಳ ಹಿನ್ನೆಲೆಯನ್ನು ಕಲೆಹಾಕಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ತೆಲಂಗಾಣ ಡಿಜಿಪಿ ಮತ್ತು ಪೊಲೀಸ್ ಅಧಿಕಾರಿಗಳಿಗೆ ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಟಿ ಚೈತ್ರಾ ಪತಿ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ

ಅತ್ಯಾಚಾರ ಘಟನೆಯ ಸಂತ್ರಸ್ತೆಗೆ ನ್ಯಾಯಕ್ಕಾಗಿ ಒತ್ತಾಯಿಸಿ ಜುಬ್ಲಿ ಹಿಲ್ಸ್ ಪಿಎಸ್‌ನಲ್ಲಿ ಜನಸೇನಾ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹಲವರನ್ನು ವಶಕ್ಕೆ ಪಡೆದ ಪೊಲೀಸರು ಗೋಶಾಮಹಲ್ ಪೊಲೀಸ್ ಕೇಂದ್ರಕ್ಕೆ ಸ್ಥಳಾಂತರಿಸಿದರು.

ಏನಿದು ಘಟನೆ?: ಮೇ 28 ರಂದು ಹೈದರಾಬಾದ್‌ನ ಜುಬಿಲಿ ಹಿಲ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮರ್ಸಿಡಿಸ್ ಕಾರಿನಲ್ಲಿ 17 ವರ್ಷದ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈ ಸಂಬಂಧ ಕ್ರಮ ಕೈಗೊಂಡಿರುವ ಪೊಲೀಸರು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 354 ಮತ್ತು 323ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸೆಕ್ಷನ್ 9 ಅನ್ನು ಪೋಕ್ಸೊ ಕಾಯ್ದೆಯ 10 ರೊಂದಿಗೆ ಈ ಪ್ರಕರಣದಲ್ಲಿ ಸೇರಿಸಲಾಗಿದೆ.

CCTVಯಲ್ಲಿ ದೃಶ್ಯ ಸೆರೆ: ಶಂಕಿತ ಆರೋಪಿಗಳು ಪಬ್‌ನನ ಹೊರಗೆ ಅಪ್ರಾಪ್ತೆ ಜೊತೆ ನಿಂತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಹುಡುಗರು ಸಂತ್ರಸ್ತೆಯನ್ನು ಮನೆಗೆ ಬಿಡಲು ಮುಂದಾಗಿದ್ದಾರೆ. ಸಂತ್ರಸ್ತೆ ಕಾರಿನ ಬಳಿ ಹೋಗುತ್ತಿದಂತೆ ಆಕೆಯ ಮೇಲೆ ಹಲ್ಲೆ ಮಾಡಲಾಗಿದೆ. ನಂತರ ಕಾರಿನೊಳಗೆಯೇ ಆರೋಪಿಗಳು ಸರದಿಯಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಇತರರು ಕಾರಿನ ಹೊರಗೆ ಕಾವಲು ನಿಂತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Share This Article
Leave a Comment

Leave a Reply

Your email address will not be published. Required fields are marked *